ಶಿವಮೊಗ್ಗ: ‘ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಶೀಘ್ರವೇ ನೈಟ್ ಲ್ಯಾಂಡಿಂಗ್ ಸೌಲಭ್ಯ ಆರಂಭವಾಗಲಿದೆ. ರಾಜ್ಯದ ಹಣದಲ್ಲಿ ನಿರ್ಮಾಣವಾದ ವಿಮಾನ ನಿಲ್ದಾಣವನ್ನು ಕೇಂದ್ರಕ್ಕೆ ಒಪ್ಪಿಸುವ ಪ್ರಶ್ನೆಯೇ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ಹಿರಿಯ ಸಮಾಜವಾದಿ ಚಿಂತಕ, ಮಾಜಿ ಶಾಸಕ ಕೋಣಂದೂರು ಲಿಂಗಪ್ಪ ಅವರ ವಿನೋಬ ನಗರದ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿ ಅಭಿನಂದಿಸಿದರು.

ತೀರ್ಥಹಳ್ಳಿ ತಾಲ್ಲೂಕು ಕೋಣಂದೂರಿನವರಾದ ಲಿಂಗಪ್ಪನವರಿಗೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ ಕುವೆಂಪು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಿಸಿತ್ತು. ಶುಕ್ರವಾರ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರೊಂದಿಗೆ ಅವರ ಮನೆಗೆ ತೆರಳಿ ಡಾಕ್ಟರೇಟ್ ಪ್ರದಾನ ಮಾಡಿದರು.

‘ನಿಮ್ಮಂತಹ ಹಿರಿಯರಿಗೆ ಗೌರವ ಡಾಕ್ಟರೇಟ್ ಲಭಿಸಿರುವುದು ನಮ್ಮೆಲ್ಲರ ಪಾಲಿಗೆ ಹೆಮ್ಮೆಯ ವಿಷಯ. ನಿಮ್ಮನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿರುವುದು ನಮ್ಮ ಪುಣ್ಯ’ ಎಂದು ಹೇಳಿದರು.

ಲಿಂಗಪ್ಪನವರು ರಾಜ್ಯದ ಶಿಕ್ಷಣ ವ್ಯವಸ್ಥೆ ಮತ್ತು ಪರೀಕ್ಷಾ ಫಲಿತಾಂಶದ ಕುರಿತು ವಿಚಾರಿಸಿದಾಗ, ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ರಾಜ್ಯವು ಶೇ 94.10 ರಷ್ಟು ಸಾಧನೆ ಮಾಡಿರುವುದಾಗಿ ಮಧು ಬಂಗಾರಪ್ಪ ತಿಳಿಸಿದರು.

‘ಹಿಂದೆ ಶೇ 70-80 ರಷ್ಟು ಫಲಿತಾಂಶ ಬರುತ್ತಿತ್ತು. ಈಗ ಐತಿಹಾಸಿಕ ಮಟ್ಟಕ್ಕೆ ಏರಿಕೆಯಾಗಿದೆ. ಪೂರಕ ಪರೀಕ್ಷೆಯ ಬದಲು ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸುವ ಹೊಸ ನೀತಿಯ ಮೂಲಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತಿದೆ. ಪರೀಕ್ಷೆ ಮುಗಿದ 20 ದಿನಗಳಲ್ಲೇ ಮತ್ತೊಂದು ಅವಕಾಶ ಸಿಗುವುದರಿಂದ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿದೆ’ ಎಂದು ಹೇಳಿದರು.

‘ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರುವ ಮೂಲಕ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವುದೇ ಸರ್ಕಾರದ ಉದ್ದೇಶ’ ಎಂದರು.

ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಶರತ್ ಅನಂತಮೂರ್ತಿ, ಕುಲಸಚಿವ ಎನ್.ಹೇಮಂತ್, ಸಿಂಡಿಕೇಟ್ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-42-320579271

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.