ಶಿವಮೊಗ್ಗದಿಂದ ಸಾಗರದ ಕಡೆಗೆ ಹೊಗುತ್ತಿದ್ದ ಬಸ್ ಹಾಗೂ ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರ್ ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನ ಮುಂಭಾಗ ಬಹುತೇಕ ಜಖಂ ಆಗಿದ್ದು, ಕಾರಿನಲ್ಲಿ ಚಾಲಕ ಮಾತ್ರ ಪ್ರಯಾಣಿಸುತ್ತಿದ್ದ ಎಂದು ತಿಳಿದುಬಂದಿದ್ದು, ಏರ್ ಬ್ಯಾಗ್ ತೆರೆದ ಪರಿಣಾಮ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.