ಶಿವಮೊಗ್ಗ: ‘ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಯು.ಆರ್. ಅನಂತಮೂರ್ತಿ ಅವರ ಹೆಸರಿನಲ್ಲಿ ಆರಂಭವಾಗಲಿರುವ ಅಧ್ಯಯನ ಪೀಠವನ್ನು ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದಲ್ಲೇ ಸ್ಥಾಪಿಸಬೇಕು’ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ ಆಗ್ರಹಿಸಿದರು.

‘2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಂತಮೂರ್ತಿ ಅಧ್ಯಯನ ಪೀಠ ಸ್ಥಾಪನೆ ಕುರಿತು ಘೋಷಣೆ ಮಾಡಿರುವುದು ಸ್ವಾಗತಾರ್ಹ ಕ್ರಮ. ಆದರೆ ಈ ಪೀಠವನ್ನು ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸುವ ಬದಲು ಅನಂತಮೂರ್ತಿ ಅವರ ಜನ್ಮಭೂಮಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ತುಂಗಾ ಮಹಾವಿದ್ಯಾಲಯದಲ್ಲೇ ಆರಂಭಿಸಬೇಕು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಅನಂತಮೂರ್ತಿ ಅವರ ಸಾಹಿತ್ಯ, ಚಿಂತನೆ ಮತ್ತು ಸಮಾಜಮುಖಿ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಅಧ್ಯಯನ ಪೀಠ ಸ್ಥಾಪನೆಯಾಗುತ್ತಿದೆ. ಆದ್ದರಿಂದ ಅವರ ನೆಲೆಯಾದ ತೀರ್ಥಹಳ್ಳಿಯಲ್ಲೇ ಪೀಠ ಸ್ಥಾಪನೆಯಾದರೆ ಅದಕ್ಕೆ ಹೆಚ್ಚಿನ ಅರ್ಥ ಸಿಗಲಿದೆ’ ಎಂದು ಹೇಳಿದರು.

ಎಚ್.ಎಂ. ಸಂಗಯ್ಯ, ಆದಿಲ್ ಖಾನ್, ಶಂಕ್ರಾನಾಯ್ಕ, ಶಿವಣ್ಣ, ಜಗದೀಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-42-495964855

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.