ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೊಗ್ಗ: ಕೊಳೆ ರೋಗ, ಅಡಿಕೆ ಮರ ರಕ್ಷಣೆ; ಮುನ್ನೆಚ್ಚರಿಕೆ ಕ್ರಮ

Published : 6 ಸೆಪ್ಟೆಂಬರ್ 2024, 13:37 IST
Last Updated : 6 ಸೆಪ್ಟೆಂಬರ್ 2024, 13:37 IST
ಫಾಲೋ ಮಾಡಿ
Comments

ಶಿವಮೊಗ್ಗ: ಹೆಚ್ಚು ಮಳೆ, ಮೋಡಕವಿದ ಮಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಅಧಿಕ ಆರ್ದ್ರತೆ (ಶೇ 70 ಕ್ಕಿಂತ ಹೆಚ್ಚು) ಮತ್ತು ಸೂರ್ಯನ ಬೆಳಕಿನ ಕೊರತೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಕೊಳೆ ರೋಗವು ಹೆಚ್ಚಳಗೊಂಡಿದೆ. ಅದರ ನಿಯಂತ್ರಣಕ್ಕೆ ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ನವಿಲೆ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ನಾಗರಾಜಪ್ಪ ಮಾಹಿತಿ ನೀಡಿದ್ದಾರೆ.

ತೋಟಗಳಲ್ಲಿ ಹೆಚ್ಚಾಗಿ ನೀರು ನಿಲ್ಲದಂತೆ ಬಸಿಗಾಲುವೆ ಚೊಕ್ಕ ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಬೇಕು.

ಕೊಳೆ ರೋಗ ಬಾಧಿತ ಕಾಯಿಗಳನ್ನು ಆರಿಸಿ ಹೊರಗೆ ಹಾಕಬೇಕು. ಗಾಳಿ ಆಡುವಂತೆ ಮಾಡಲು ಅಂತರ ಬೆಳೆಗಳ ಹಾಗೂ ತೋಟದ ಅಂಚಿನ ಮರಗಳ ಹೆಚ್ಚುವರಿ ರೆಂಬೆಗಳ ಕತ್ತರಿಸಿ ತೆಗೆಯಬೇಕು.

ವೈಜ್ಞಾನಿಕವಾಗಿ ತಯಾರಿಸಿದ ರಸಸಾರ ಶೇ 1ರ ಬೋರ್ಡೋ ದ್ರಾವಣ ಅಥವಾ ಶೇ.0.2 ರ ಮೆಟಲಾಕ್ಸಿಲ್ ಎಂ.ಜಡ್ (2 ಗ್ರಾಂ 1 ಪ್ರತಿ ಲೀ. ನೀರಿನಲ್ಲಿ ಕರಗಿಸಿ) ಅಥವಾ ಶೇ.0.2 ರ ಮೆಟಲಾಕ್ಸಿಲ್ + ಮ್ಯಾಂಕೋಜೆಬ್ (2 ಗ್ರಾಂ 1 ಪ್ರತಿ ಲೀ. ನೀರಿನಲ್ಲಿ ಕರಗಿಸಿ) ಅಥವಾ ಶೇ. 0.1 ರ ಮ್ಯಾಂಡಿಪ್ರೇಪಮಿಡ್ (1 ಮಿ.ಲಿ ಪ್ರತಿ ಲೀ. ನೀರಿನಲ್ಲಿ) ಅಥವಾ ಶೇ. 0.3 ರ ತಾಮ್ರದ ಆಕ್ಸಿಕ್ಲೋರೈಡ್ (3 ಗ್ರಾಂ 1 ಪ್ರತಿ ಲೀ. ನೀರಿನಲ್ಲಿ ಕರಗಿಸಿ)  ಗೊನೆಗಳಿಗೆ ಹಾಗೂ ಎಲೆಗಳಿಗೆ ಮತ್ತು ಸುಳಿಭಾಗಕ್ಕೆ ಚೆನ್ನಾಗಿ ನೆನೆಯುವಂತೆ ಸೂಕ್ತ ಅಂಟಿನೊಂದಿಗೆ (ರಾಳ) ಸಿಂಪರಣೆ ಮಾಡಬೇಕು. ಹೀಗೆ ಮಾಡುವುದರಿಂದ ಕೊಳೆ ರೋಗದ ಜೊತೆಗೆ ಎಲೆಚುಕ್ಕೆ ರೋಗ ಕೂಡ ನಿಯಂತ್ರಿಸಲು ಸಹಾಯವಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT