ಶಿವಮೊಗ್ಗದ ಬುದ್ಧನಗರದ ನಿವಾಸಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಟೈಪಿಸ್ಟ್ ಆಗಿರುವ ಪ್ರೇಮ್ ಕುಮಾರ್ (24) ಮೃತ ಯುವಕ. ಆಟೊದಲ್ಲಿದ್ದ ಮನೋಜ್ (21), ಪವನ್ (21) ಹಾಗೂ ಗಿರೀಶ್ (21) ಅವರಿಗೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಲ್ವರೂ ಗೆಳೆಯರು ರಜೆಯ ದಿನ ಆಟೊದಲ್ಲಿ ಶಿವಮೊಗ್ಗದಿಂದ ಸಕ್ರೇಬೈಲು ಕಡೆಗೆ ತೆರಳುತ್ತಿದ್ದರು. ಈ ವೇಳೆ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತ್ಯಾಗರ್ತಿ: ಕೊರಲಿಕೊಪ್ಪ ಗ್ರಾಮದ ಬಳಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ, ಆನಂದಪುರ ಸಮೀಪದ ಬೀಸನ ಗದ್ದೆಯ ಮಹೇಶ್ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಿಪ್ಪನ್ಪೇಟೆಯಿಂದ ಆನಂದಪುರ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಆನಂದಪುರದಿಂದ ರಿಪ್ಪನ್ಪೇಟೆಗೆ ಹೋಗುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿತ್ತು.

ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಆನಂದಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260321-42-1141330493

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.