ಶಿವಮೊಗ್ಗ: ‘ಜಿಲ್ಲೆಯ ಆಯನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರಿಗೆ ಸೂಕ್ತ ಚಿಕಿತ್ಸೆ ದೊರೆಯದೇ ಇರುವುದನ್ನು ಖಂಡಿಸಿ ಏ.22ರಂದು ಪಾದಯಾತ್ರೆ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ’ ಎಂದು ಆಯನೂರು ಸಮುದಾಯ ಆರೋಗ್ಯ ಕೇಂದ್ರ ಹೋರಾಟ ಸಮಿತಿಯ ಮುಖಂಡ ಬಸಪ್ಪಗೌಡ ತಿಳಿಸಿದರು.

‘ಆಯನೂರು ಆರೋಗ್ಯ ಕೇಂದ್ರಕ್ಕೆ ನೂರಾರು ಗ್ರಾಮಗಳಿಂದ ರೈತರು, ಬಡವರು, ಕೂಲಿ ಕಾರ್ಮಿಕರು, ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳು ಚಿಕಿತ್ಸೆಗೆ ಬರುತ್ತಾರೆ. ಆದರೆ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ಇದ್ದ ವೈದ್ಯರನ್ನು ವರ್ಗಾವಣೆ ಮಾಡಲಾಗಿದೆ. ಸಿಬ್ಬಂದಿ ಕೊರತೆಯಿಂದ ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ಸಿಗುತ್ತಿಲ್ಲ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಆಸ್ಪತ್ರೆಯಲ್ಲಿ ಮೂಲ ಸೌಲಭ್ಯಗಳ ಕೊರತೆ ಇದ್ದು, ಸಾವಿರಾರು ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣವೇ ನುರಿತ ವೈದ್ಯರನ್ನು ನೇಮಕ ಮಾಡಬೇಕು ಹಾಗೂ ಮೂಲಸೌಲಭ್ಯ ಒದಗಿಸಬೇಕು’ ಎಂದು ಆಗ್ರಹಿಸಿದರು.

‘ಏ.22ರ ಬೆಳಿಗ್ಗೆ 10ಕ್ಕೆ ಆಯನೂರಿನ ರಂಗನಾಥ ಸ್ವಾಮಿ ದೇವಸ್ಥಾನದಿಂದ ಸಮುದಾಯ ಆರೋಗ್ಯ ಕೇಂದ್ರದವರೆಗೆ ಪಾದಯಾತ್ರೆ ನಡೆಯಲಿದೆ. ನಂತರ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ. ಪ್ರತಿಭಟನೆಯಲ್ಲಿ ಸ್ತ್ರೀಶಕ್ತಿ ಸಂಘಗಳು, ಸಾಮಾಜಿಕ ಹೋರಾಟಗಾರರು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಗಂಗಾನಾಯ್ಕ, ಎಂ. ಗಿರೀಶ್, ನರಸಿಂಹ, ಕಿರಣ್ಕುಮಾರ್, ಸೈಯದ್ ಅಹ್ಮದ್, ಆನಂದ್ಕುಮಾರ್, ಅವಿನಾಶ್ ಮರಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-42-503598776

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.