ಶಿವಮೊಗ್ಗ: ‘ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವುಗಳ ಅಕ್ರಮ ಸಾಗಾಣೆ ಹಾಗೂ ಹತ್ಯೆ ತಡೆಗಟ್ಟಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರಾಂತ್ಯ ಸುರಕ್ಷಾ ಪ್ರಮುಖ ರಾಜೇಶ್ಗೌಡ ಆಗ್ರಹಿಸಿದರು.

‘ಅಕ್ರಮ ಕಸಾಯಿಖಾನೆಗಳನ್ನು ಪತ್ತೆಹಚ್ಚಿ ಶಾಶ್ವತವಾಗಿ ಮುಚ್ಚಿಸಬೇಕು. ಜಾನುವಾರು ಹತ್ಯೆ ನಡೆಯುವ ಮನೆ, ಕಟ್ಟಡ ಹಾಗೂ ಜಾಗಗಳನ್ನು ಜಪ್ತಿ ಮಾಡಬೇಕು. ಆರೋಪಿಗಳಿಗೆ ಏಳು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಬೇಕು’ ಎಂದು ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಮಾಂಸ ಖರೀದಿಸುವವರನ್ನೂ ಅಪರಾಧಿಗಳೆಂದು ಪರಿಗಣಿಸಿ ಕ್ರಮ ಕೈಗೊಳ್ಳಬೇಕು. ಗೋವಧೆ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗಿರುವ ಆರೋಪಿಗಳನ್ನು ಕರೆದು ಎಚ್ಚರಿಕೆ ನೀಡಬೇಕು. ಬಕ್ರೀದ್ ಸಂದರ್ಭದಲ್ಲಿ ಪ್ರಾಣಿವಧೆ ನಿಷೇಧದ ಬಗ್ಗೆ ಪೊಲೀಸ್ ಇಲಾಖೆ ವ್ಯಾಪಕ ಜಾಗೃತಿ ಮೂಡಿಸಬೇಕು’ ಎಂದರು.

‘ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ, ಆಹಾರ ಸುರಕ್ಷತೆ ಹಾಗೂ ಕಸಾಯಿಖಾನೆ ನಿಯಮಾವಳಿ ಸೇರಿದಂತೆ ವಿವಿಧ ಕಾನೂನುಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಶಾಲೆ– ಕಾಲೇಜುಗಳ ವಸ್ತ್ರಸಂಹಿತೆ ಕುರಿತ ಸರ್ಕಾರದ ಹೊಸ ಆದೇಶದಿಂದ ಮತ್ತೆ ಹಿಜಾಬ್ ವಿವಾದ ಆರಂಭವಾಗಿದೆ. ವಿದ್ಯಾರ್ಥಿಗಳಲ್ಲಿ ತಾರತಮ್ಯ ಉಂಟುಮಾಡುವ ರೀತಿಯ ಕ್ರಮಗಳನ್ನು ಸರ್ಕಾರ ಕೈಬಿಡಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಸಾಮರಸ್ಯ ಪ್ರಮುಖ್ ರಮೇಶ್ ಬಾಬು ಹೇಳಿದರು.

ಸುರೇಶ್ ಬಾಬು, ವಡಿವೇಲು ರಾಘವನ್, ಅಂಕುಶ್, ಶಕುಂತಲಾ, ಯೋಗೀಶ್ ನಾಯಕ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-42-1964957941

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.