ಶಿವಮೊಗ್ಗ: ‘ಇಲ್ಲಿನ ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ, ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೃತಜ್ಞತಾ ಸಮರ್ಪಣಾ ಸಮಾರಂಭವನ್ನು ಮೇ 16 ಮತ್ತು 17ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸ್ವಾಗತ ಸಮಿತಿ ಉಪಾಧ್ಯಕ್ಷ ರುದ್ರಮುನಿ ಸಜ್ಜನ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಶಿವಮೊಗ್ಗದಲ್ಲಿ 35 ವರ್ಷಗಳ ನಂತರ ಅಡ್ಡಪಲ್ಲಕ್ಕಿ ಉತ್ಸವ ನಡೆಯುತ್ತಿದೆ. ಜಿಲ್ಲೆಯ ಹಾಗೂ ಹೊರ ಜಿಲ್ಲೆಗಳ ಸಾವಿರಾರು ಭಕ್ತರು ಪಾಲ್ಗೊಳ್ಳಲಿದ್ದು, ಇದಕ್ಕಾಗಿ ಅಂತಿಮ ಸಿದ್ಧತೆ ನಡೆಯುತ್ತಿದೆ. ಬಸವೇಶ್ವರ ಸೊಸೈಟಿ ಶತಮಾನೋತ್ಸವ ಸಮಾರಂಭವು ಮೇ 16ರ ಬೆಳಿಗ್ಗೆ 10 ಗಂಟೆಗೆ ಕುವೆಂಪು ರಂಗ ಮಂದಿರದಲ್ಲಿ ನಡೆಯಲಿದೆ’ ಎಂದರು.

‘ಮೇ 17ರಂದು ಮಧ್ಯಾಹ್ನ 3ಕ್ಕೆ ಗಾಂಧಿ ಬಜಾರ್ನ ಬಸವೇಶ್ವರ ದೇವಾಲಯದ ಆವರಣದಿಂದ ಅಡ್ಡಪಲ್ಲಕ್ಕಿ ಉತ್ಸವ ಆರಂಭವಾಗಲಿದೆ. ಬಿ.ಎಚ್. ರಸ್ತೆ, ನೆಹರೂ ರಸ್ತೆ ಮೂಲಕ ವಿನೋಬ ನಗರದ ಅಲ್ಲಮಪ್ರಭು ಮೈದಾನಕ್ಕೆ ಮೆರವಣಿಗೆ ತೆರಳಲಿದೆ. ಅಲ್ಲಿ ಧಾರ್ಮಿಕ ಸಭೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ’ ಎಂದು ಹೇಳಿದರು.

ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಬಳ್ಳೇಕೆರೆ ಸಂತೋಷ್, ಖಜಾಂಚಿ ಎಸ್.ಪಿ. ದಿನೇಶ್, ಪ್ರಮುಖರಾದ ಡಿ.ಜಿ.ಬೆನಕಪ್ಪ, ಚಂದ್ರಯ್ಯ, ವಿರೂಪಾಕ್ಷಪ್ಪ, ವಾಗ್ದೇವಿ, ಸುಜಾತಾ ಬಸವರಾಜ್, ಪಿ.ರುದ್ರೇಶ್, ರಾಜಶೇಖರ್ ಮತ್ತಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-42-259505215

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.