ಶಿವಮೊಗ್ಗ: ‘ಇಲ್ಲಿನ ಬಸವೇಶ್ವರಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಮೇ 16ರ ಬೆಳಿಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಬಳ್ಳೇಕೆರೆ ಸಂತೋಷ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸಮಾರಂಭದ ಸಾನ್ನಿಧ್ಯವನ್ನು ರಂಭಾಪುರಿ ಪೀಠದ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಾಶೀಪೀಠದ ಚಂದ್ರಶೇಖರ ಶಿವಾಚಾರ್ಯರು ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಾರಂಭ ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆ ಸಂಸದ ಬಿ.ವೈ.ರಾಘವೇಂದ್ರ, ಜಿ.ಟಿ.ದೇವೇಗೌಡ ಬಿಡುಗಡೆ ಮಾಡಲಿದ್ದಾರೆ’ ಎಂದರು.

ಬೆಳಿಗ್ಗೆ 10.30ಗಂಟೆಗೆ ವೇದಿಕೆ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಸಂಜೆ 5.30ಕ್ಕೆ ಶಮಿತಾ ಮಲ್ನಾಡ್ ತಂಡದವರಿಂದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ನಡೆಯಲಿದೆ. ಮಿಮಿಕ್ರಿ ಗೋಪಿ ರಸಸಂಜೆ ಕಾರ್ಯಕ್ರಮ ನಡೆಸಿಕೊಡಲಿದ್ದು, ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವ ಮರುಳಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಕೆ.ಎಸ್.ತಾರಾನಾಥ್, ಕೆ.ಸಿ.ಫಾಲಾಕ್ಷಪ್ಪ, ಎಚ್.ಎಂ.ಶಿವಾನಂದ್, ಎಚ್.ವಿ.ಮರುಳೇಶ್, ಎಂ.ರುದ್ರಪ್ಪ, ಅನಿತಾ ರವಿಶಂಕರ್, ಎಂ.ಆರ್.ಪ್ರಕಾಶ್, ಎಂ.ಜೆ.ಚನ್ನೇಶ್, ಎಸ್.ಸದಾಶಿವಮೂರ್ತಿ, ಎಸ್.ಪಿ.ಶಶಿಧರ್, ಎಂ.ರುದ್ರಪ್ಪ, ಎಚ್.ಸಿ.ಬಸವರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-42-1137314386

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.