ಶಿವಮೊಗ್ಗ: ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆಯನ್ನು ತಕ್ಷಣ ಕೈಬಿಡುವಂತೆ ಆಗ್ರಹಿಸಿ ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆಯ (ಎಪಿಸಿಆರ್) ಜಿಲ್ಲಾ ಘಟಕದಿಂದ ಶನಿವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಸಾಗರ ತಾಲ್ಲೂಕಿನ ಆವಿನಹಳ್ಳಿ ಹೋಬಳಿ ವ್ಯಾಪ್ತಿಯ ಬೇಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮವು ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ನಡೆಸುತ್ತಿರುವ ತೆರೆಮರೆಯ ಸಿದ್ಧತೆ ಸ್ಥಳೀಯರಲ್ಲಿ ತೀವ್ರ ಆತಂಕವನ್ನುಂಟುಮಾಡಿದೆ ಎಂದು ತಿಳಿಸಿದ್ದಾರೆ.

ಜನವರಿ 31ರಂದು ಎನ್ಟಿಪಿಸಿ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದು ಹಾಗೂ ಇತ್ತೀಚೆಗೆ ಬೇಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿರುವುದು ಈ ಆತಂಕಕ್ಕೆ ಪುಷ್ಠಿ ನೀಡಿದೆ. ಈ ಯೋಜನೆಯಡಿ ಅಂದಾಜು 1,200 ಎಕರೆ ಪ್ರದೇಶ ಗುರುತಿಸಲಾಗಿದ್ದು, ಇದರಲ್ಲಿ 485 ಎಕರೆ ಗೋಮಾಳ ಮತ್ತು 900 ಎಕರೆಗೂ ಅಧಿಕ ದಟ್ಟ ಅರಣ್ಯ ಹಾಗೂ ಕಂದಾಯ ಭೂಮಿ ಒಳಗೊಂಡಿದೆ ಎಂದು ತಿಳಿದುಬಂದಿದೆ. ಈಗಾಗಲೇ ಸರ್ವೆ ನಂಬರ್ 104, 94, 80, 82 ಸೇರಿದಂತೆ ಹತ್ತಾರು ಜಮೀನುಗಳ ವಿವರವನ್ನು ತಾಲ್ಲೂಕು ಆಡಳಿತವು ಜಿಲ್ಲಾಧಿಕಾರಿ ಕಚೇರಿಗೆ ಕಳುಹಿಸಿದೆ. ಇದು ಅನುಮಾನಕ್ಕೆ ಕಾರಣವಾಗಿದೆ’ ಎಂದು ಹೇಳಿದ್ದಾರೆ.

‘ಈ ಭಾಗದ ಜನರು ದಶಕಗಳ ಹಿಂದೆ ಲಿಂಗನಮಕ್ಕಿ, ಚಕ್ರಾ, ಸಾವೆಹಕ್ಲು ಮತ್ತು ಮಾಣಿ ಅಣೆಕಟ್ಟು ನಿರ್ಮಾಣದಿಂದಾಗಿ ನೆಲೆ ಕಳೆದುಕೊಂಡು ನಿರಾಶ್ರಿತರಾಗಿದ್ದು, ಸಾಕಷ್ಟು ಕಹಿ ನೆನಪುಗಳನ್ನು ಹೊಂದಿದ್ದಾರೆ. ಅಂದು ಸಂತ್ರಸ್ತರಾದ ಸಾವಿರಾರು ಕುಟುಂಬಗಳಿಗೆ ಇಂದಿಗೂ ಸರಿಯಾದ ಪುನರ್ವಸತಿ ದೊರೆತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ವಲಯ ಹಾಗೂ ಶರಾವತಿ ಹಿನ್ನೀರಿನ ವ್ಯಾಪ್ತಿಯಲ್ಲಿ ಅಣು ಸ್ಥಾವರದಂತಹ ವಿನಾಶಕಾರಿ ಯೋಜನೆ ತರುವುದು ಸ್ಥಳೀಯ ಜನರ ಸಾವು, ಬದುಕಿನ ಪ್ರಶ್ನೆಯಾಗಿದೆ. ಅಧಿಕಾರಿಗಳು ಸ್ಥಳ ಲಭ್ಯತೆಯ ವರದಿಯನ್ನು ಈಗಾಗಲೇ ಸಲ್ಲಿಸಿದ್ದರೂ ಸಾರ್ವಜನಿಕರಿಗೆ ಯಾವುದೇ ಸ್ಪಷ್ಟ ಮಾಹಿತಿ ನೀಡದೆ ಗೋಪ್ಯತೆ ಕಾಯ್ದುಕೊಳ್ಳುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ’ ಎಂದಿದ್ದಾರೆ.

‘ಮಲೆನಾಡಿನ ಜನರ ಹಿತದೃಷ್ಟಿಯಿಂದ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆಯ ಪ್ರಸ್ತಾವವನ್ನು ತಕ್ಷಣವೇ ಕೈಬಿಡುವಂತೆ ಆಗ್ರಹಿಸುತ್ತೇವೆ. ದಟ್ಟ ಅರಣ್ಯ ಮತ್ತು ಜೀವವೈವಿಧ್ಯ ನಾಶಮಾಡುವ ಹಾಗೂ ಜನವಸತಿಗೆ ಅಪಾಯಕಾರಿ ಆದ ಈ ಯೋಜನೆಯನ್ನು ವಿರೋಧಿಸುತ್ತೇವೆ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಸಂಘಟನೆಯ ಜಿಲ್ಲಾ ಘಟಕದ ಗೌರವ ಅಧ್ಯಕ್ಷ ಆರ್.ಟಿ.ನಟರಾಜ್, ಅಧ್ಯಕ್ಷೆ ಸರೋಜಾ ಪಿ.ಚಂಗೊಳ್ಳಿ, ಮೊಹಮ್ಮದ್ ರಫೀ, ಎಸ್.ವಿ.ರಾಜಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-42-1643335559

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.