ಶಿವಮೊಗ್ಗ: ‘ಪ್ರಸ್ತಾವಿತ ಬೇಸೂರು ಅಣುವಿದ್ಯುತ್ ಯೋಜನೆ ವಿರೋಧಿಸಿ ರಾಷ್ಟ್ರಭಕ್ತರ ಬಳಗ ಮತ್ತು ‘ಪರಿಸರಕ್ಕಾಗಿ ನಾವು’ ಸಂಘಟನೆಯಿಂದ ಮಂಗಳವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

‘ಪರಿಸರದ ದೃಷ್ಟಿಯಿಂದ ಪಶ್ಚಿಮ ಘಟ್ಟಗಳು ಅತೀ ಸೂಕ್ಷ್ಮ ಹಾಗೂ ಅಳಿವಿನಂಚಿನಲ್ಲಿರುವ ಪ್ರದೇಶವಾಗಿವೆ. ಇಲ್ಲಿ ಅಣುವಿದ್ಯುತ್ ಯೋಜನೆ ಜಾರಿಗೊಂಡಲ್ಲಿ ಅಪಾರ ಪ್ರಮಾಣದ ಸಸ್ಯ, ಪ್ರಾಣಿ ಸಂಕುಲ ಹಾಗೂ ಜಲ ಮೂಲಗಳ ಮೇಲೆ ಗಂಭೀರ ಪರಿಣಾಮವಾಗಲಿದೆ. ಯುನೆಸ್ಕೋ, ಕಸ್ತೂರಿ ರಂಗನ್ ಮತ್ತು ಮಾಧವ್ ಗಾಡ್ಗೀಳ್ ವರದಿಗಳಲ್ಲಿಯೂ ಪಶ್ಚಿಮ ಘಟ್ಟಗಳಲ್ಲಿ ಹೊಸ ಯೋಜನೆಗಳು ಕೈಗೊಳ್ಳುವುದು ಅಪಾಯಕಾರಿ ಎಂದು ಉಲ್ಲೇಖಿಸಲಾಗಿದೆ’ ಎಂದು ಪ್ರತಿಭಟನಕಾರರು ತಿಳಿಸಿದರು.

‘ಜಲವಿದ್ಯುತ್ ಯೋಜನೆಗಳಿಂದ ಈಗಾಗಲೇ ಅಲ್ಲಿನ ಪರಿಸರ ವ್ಯವಸ್ಥೆಗೆ ಹಾನಿಯಾಗಿದೆ. ಈಗ ಮತ್ತಷ್ಟು ಪರಿಸರ ನಾಶವಾದರೆ ದಕ್ಷಿಣ ಭಾರತದ ಕೋಟ್ಯಂತರ ಜನರು ಸಂಕಷ್ಟಕ್ಕೆ ಸಿಲುಕಲಿದ್ದಾರೆ’ ಎಂದು ಎಚ್ಚರಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಹಿಸಿದ್ದರು. ಪ್ರಮುಖರಾದ ಕೆ.ಈ. ಕಾಂತೇಶ್, ಶೇಖರ್ ಗೌಳೇರ್, ಈ.ವಿಶ್ವಾಸ್, ಮೋಹನ್ಕುಮಾರ್ ಜಾಧವ್, ಕುಬೇರಪ್ಪ, ವಕೀಲರಾದ ವಾಗೀಶ್, ಆ.ಮ.ಪ್ರಕಾಶ್, ಮಾಜಿ ಮೇಯರ್ ಲತಾ ಗಣೇಶ್, ಲಕ್ಷ್ಮೀ ಶಂಕರ ನಾಯಕ್, ರವಿ, ಎಂ.ಜಿ.ಬಾಲು, ಶ್ರೀಕಾಂತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-42-1806546791

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.