ಶಿವಮೊಗ್ಗ: ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ ನೀರು ಯೋಜನೆಯಡಿ ಕುಡಿಯುವ ನೀರಿನ ಪೂರೈಕೆಗಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮೇ 18ರಿಂದ 23ರವರೆಗೆ ಪ್ರತಿದಿನ 2000 ಕ್ಯುಸೆಕ್ನಂತೆ ನೀರು ಹರಿಸಲಾಗುವುದು.

ಆದ್ದರಿಂದ ನದಿಯ ದಂಡೆಯ ಕೆಳಮಟ್ಟದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಮಾಡುವುದು ಇತ್ಯಾದಿ ಚಟುವಟಿಕೆ ಮಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಮೇಲೆ ತಿಳಿಸಿದ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್ಸೆಟ್ಗಳಿಂದ ನೀರೆತ್ತುವುದನ್ನೂ ನಿಷೇಧಿಸಲಾಗಿದೆ ಎಂದು ಬಿ.ಆರ್. ಪ್ರಾಜೆಕ್ಟ್, ಭದ್ರಾ ಜಲಾಶಯ ಯೋಜನೆ ಕುಡಿಯುವ ನೀರಿನ ಸಲಹಾ ಸಮಿತಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-42-1846741181

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.