ಹಾಲೇಶಪ್ಪ ಅವರು ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಲೇ 3,000ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಹಸಿರು ಸೇನಾನಿ ಎಂದು ಹೆಸರು ಗಳಿಸಿದ್ದಾರೆ. 40ಕ್ಕೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ರಕ್ತದಾನದ ಮಹತ್ವ ಸಾರುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಇವರ ಸಮಾಜಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಸೆ. 22ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.