ಹೊಳೆಹೊನ್ನೂರು: ಸಮೀಪದ ದಾಸರಕಲ್ಲಹಳ್ಳಿ ಗ್ರಾಮದಲ್ಲಿ ಬುಧವಾರ ಕ್ಷುಲ್ಲಕ ಕಾರಣಕ್ಕಾಗಿ ಅಣ್ಣನೇ ಕುಡುಗೋಲಿನಿಂದ ತಮ್ಮನನ್ನು ಹೊಡೆದು ಕೊಲೆ ಮಾಡಿದ್ದಾನೆ.

ಸಂತೋಷ್ (40) ಕೊಲೆಯಾದ ವ್ಯಕ್ತಿ. ಆರೋಪಿ ರಮೇಶ್ (48) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮೂವರು ಸಹೋದರರು ಕೂಲಿ ಕೆಲಸ ಮಾಡುತ್ತಿದ್ದಾರೆ. ಮೃತ ಸಂತೋಷ್ಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಇದ್ದು, ವೈಮನಸ್ಸಿನಿಂದ ಕುಟುಂಬದಿಂದ ದೂರ ಉಳಿದಿದ್ದರು.

ತಮ್ಮನ ಸಂಸಾರ ಹಾಗೂ ಆಸ್ತಿ ವಿಚಾರವಾಗಿ ಆರೋಪಿ ರಮೇಶ್ ಸಂತೋಷನಿಗೆ ಬೈದಿದ್ದಾರೆ. ಇಬ್ಬರ ನಡುವೆ ವಾಗ್ವಾದ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ರಮೇಶ್ ಕುಡುಗೋಲಿನಿಂದ ಸಂತೋಷ್ನ ಬೆನ್ನು, ತೊಡೆ, ಭುಜದ ಮೇಲೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ಅಸ್ವಸ್ಥರಾಗಿದ್ದ ಸಂತೋಷ ಅವರನ್ನು ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-42-1634496215

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.