ಶಿವಮೊಗ್ಗ: ‘ಜಿಲ್ಲೆಯಲ್ಲಿ ದೂರಸಂಪರ್ಕ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿ ಬಿಎಸ್ಎನ್ಎಲ್ ವತಿಯಿಂದ ಕೈಗೊಳ್ಳಲಾದ 4ಜಿ ಸ್ಯಾಚುರೇಶನ್ ಯೋಜನೆ ಈ ವರ್ಷದ ಅಂತ್ಯದೊಳಗೆ ಪೂರ್ಣಗೊಳಿಸುವಂತೆ’ ಸಂಸದ ಬಿ.ವೈ. ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಬಿಎಸ್ಎನ್ಎಲ್ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಬಿ.ಎಸ್.ಎನ್.ಎಲ್ ಸಲಹಾ ಸಮಿತಿ (ಟಿಎಸಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘4ಜಿ ಸ್ಯಾಚುರೇಷನ್ ಯೋಜನೆಯ 1ರಿಂದ 4ನೇ ಕೆಟಗರಿ ಕೆಲಸಗಳ ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಟವರ್ ಅಳವಡಿಕೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಅರಣ್ಯ ಭೂಮಿ ವಿಷಯಕ್ಕೆ ಸಂಬಂಧಿಸಿದ ಸಮಸ್ಯೆ ಬಗ್ಗೆ ಶಿವಮೊಗ್ಗ ಮತ್ತು ಕಾರ್ಕಳ ಸಿಸಿಎಫ್ ಬಳಿ ಚರ್ಚಿಸಿ ಪರಿಹಾರಕ್ಕೆ ಕ್ರಮ ವಹಿಸಲಾಗುವುದು’ ಎಂದರು.

‘ಜಿಲ್ಲೆಯಾದ್ಯಂತ ದೂರಸಂಪರ್ಕ ಸೇವೆಗಳನ್ನು ಮತ್ತಷ್ಟು ಉತ್ತಮಪಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಸಾಗರ, ಹೊಸನಗರ, ತೀರ್ಥಹಳ್ಳಿಯಲ್ಲಿ ಇನ್ಫ್ರಾ ಕೆಲಸ ನಡೆಯುತ್ತಿದ್ದು, ಅದನ್ನು ಶೀಘ್ರವೇ ಪೂರ್ಣಗೊಳಿಸುವಂತೆ’ ಸೂಚಿಸಿದರು.

ಶಿಕಾರಿಪುರದ ಮಲ್ಲೇನಹಳ್ಳಿ, ಸೊರಬದ ಕಾನಹಳ್ಳಿ, ಬರಿಗೆ ಸೇರಿದಂತೆ ವಿವಿಧೆಡೆ ತಡೆ ಹಿಡಿಯಲಾದ ಟವರ್ ಬಗ್ಗೆ ಪರಿಶೀಲಿಸಿ, ಪ್ರಸ್ತಾವ ಕೈಬಿಡದೇ ಪರಿಗಣಿಸುವಂತೆ ತಿಳಿಸಿದ ಅವರು, ಸರ್ವೆ ಕಾರ್ಯ ಸಮರ್ಪಕವಾಗಿ ಮಾಡಲು, ಬಾಕಿ ಇರುವ ಸರ್ವೆ ಕಾರ್ಯ ಪೂರ್ಣಗೊಳಿಸುವಂತೆ ತಿಳಿಸಿದರು.

ಟವರ್ ಕಮಿಷನಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳೇನಾದರೂ ಇದ್ದಲ್ಲಿ ಸ್ಥಳೀಯ ಸದಸ್ಯರ ಸಹಕಾರ ತೆಗೆದುಕೊಂಡು ಪರಿಹರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ಬಿಎಸ್ಎನ್ಎಲ್ ವೈ–ಫೈ ಕರೆ ಸೇವೆಗಳು, ವಿದ್ಯಾಮಿತ್ರ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಬಿಎಸ್ಎನ್ಎಲ್ ಪ್ರಧಾನ ವ್ಯವಸ್ಥಾಪಕ ವಿನಯ್ ಕುಮಾರ್ ಸಿನ್ಹಾ, ಡಿಜಿಎಂ ಸಮಿತಾ ಸರ್ಕಾರ್, ಎಜಿಎಂಗಳಾದ ರೂಬನ್ ವಿಜಯ ಸಿಂಗ್, ಗಿರೀಶ್ ಮೂಲಭಾರತಿ ಹಾಗೂ ದೂರವಾಣಿ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-42-171169893

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.