ಶಿವಮೊಗ್ಗ : ಇಲ್ಲಿನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಎನ್.ಹೇಮಂತ್ ಅವರ ಹೆಸರು ಮತ್ತು ಭಾವಚಿತ್ರ ಬಳಸಿಕೊಂಡು ಸೈಬರ್ ವಂಚಕರು ನಕಲಿ ವಾಟ್ಸ್ ಆ್ಯಪ್ ಖಾತೆ ಸೃಷ್ಟಿಸಿದ್ದಾರೆ. ಈ ಸಂಬಂಧ ಐಎಎಸ್ ಅಧಿಕಾರಿಯೂ ಆದ ಹೇಮಂತ್ ನಗರದ ಸಿಇಎನ್ (ಸೈಬರ್, ಆರ್ಥಿಕ ಮತ್ತು ಮಾದಕವಸ್ತು ಅಪರಾಧಗಳ) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಂಚಕರು ವಿದೇಶದಲ್ಲಿ ನೋಂದಣಿಯಾದ ಮೊಬೈಲ್ ಸಂಖ್ಯೆ ಬಳಸಿಕೊಂಡು ನಕಲಿ ವಾಟ್ಸ್ ಆ್ಯಪ್ ಖಾತೆ ತೆರೆದಿದ್ದಾರೆ. ಅದಕ್ಕೆ ಸಿಇಒ ಅವರ ಭಾವಚಿತ್ರವನ್ನು ಡಿಪಿ ಆಗಿ ಬಳಸಿದ್ದು, ಈ ನಕಲಿ ಖಾತೆಯ ಮೂಲಕ ವಿವಿಧ ಅಧಿಕಾರಿಗಳಿಗೆ ಸಂದೇಶಗಳ ಕಳುಹಿಸಿ ವಂಚಿಸಲು ಯತ್ನಿಸಿದ್ದಾರೆ. ಅದು ಗಮನಕ್ಕೆ ಬರುತ್ತಿದ್ದಂತೆಯೇ ಹೇಮಂತ್ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-42-19749974

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.