ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಗರ | ಯುವತಿಗೆ ವಂಚನೆ ಆರೋಪ; ಬಿಜೆಪಿ ಯುವ ಮುಖಂಡನ ಸೆರೆ

Published 23 ಜೂನ್ 2024, 16:23 IST
Last Updated 23 ಜೂನ್ 2024, 16:23 IST
ಅಕ್ಷರ ಗಾತ್ರ

ಸಾಗರ: ಮದುವೆ ಆಗುವುದಾಗಿ ನಂಬಿಸಿ, ಯುವತಿಯ ಜೊತೆ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದ ಆರೋಪದ ಮೇರೆಗೆ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಘಟಕದ ಕಾರ್ಯದರ್ಶಿ ಅರುಣ್ ಕುಗ್ವೆ ಅವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.

ಯುವತಿ ಕುಟುಂಬಕ್ಕೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಅರುಣ್ ಕುಗ್ವೆ ಅವರ ತಮ್ಮ ಗಣೇಶ್‌ ವಿರುದ್ಧವೂ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

‘ಅರುಣ್ ಕುಗ್ವೆ 2021ರಲ್ಲಿ ಪರಿಚಯವಾಗಿದ್ದರು. ಮದುವೆ ಆಗುವುದಾಗಿ ನಂಬಿಸಿ ಮಾತಿಗೆ ತಪ್ಪಿದ್ದರಿಂದ ಮಾರ್ಚ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದೆ. ನಂತರ ಮದುವೆ ಆಗುವುದಾಗಿ ಮತ್ತೆ ಭರವಸೆ ನೀಡಿದ್ದರು. ಈಗ ಮತ್ತೆ ಮೋಸ ಮಾಡಿದ್ದಾರೆ’ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

‘ನನಗೆ ಗೊತ್ತಿಲ್ಲದಂತೆ ಖಾಸಗಿ ಕ್ಷಣಗಳ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರಿಸಿಕೊಂಡಿದ್ದರು. ಮದುವೆ ವಿಷಯ ಪ್ರಸ್ತಾಪಿಸಿದಾಗ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು’ ಎಂದೂ ದೂರಿನಲ್ಲಿ ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT