ಶಿವಮೊಗ್ಗ: ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯು ಸಾಮಾಜಿಕ ಕಳಂಕ ಮತ್ತು ಆರ್ಥಿಕ ಸಮಸ್ಯೆ ಆಗಿದೆ. ಸಮಾಜದ ಸಂಘಟಿತ ಪ್ರಯತ್ನ ಹಾಗೂ ಹೋರಾಟದಿಂದ ಈ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ಕಾರ್ಮಿಕ ಇಲಾಖೆ ಜಾಗರೂಕತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶೈಕ್ಷಣಿಕ ಅವಕಾಶಗಳನ್ನು ಕಿತ್ತುಕೊಳ್ಳುತ್ತದೆ. ಮಕ್ಕಳಿಂದ ದುಡಿಸಿಕೊಳ್ಳುವುದು ಸಂವಿಧಾನದ ಆಶಯಕ್ಕೆ ವಿರುದ್ಧ ಎಂದರು.

ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವವರಿಗೆ 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ₹ 20,000 ದಿಂದ ₹ 50,000 ದವರೆಗೆ ದಂಡ ವಿಧಿಸಬಹುದಾಗಿದೆ. ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚುರ ಪಡಿಸುವಂತೆ, ಜನಜಾಗೃತಿಗಾಗಿ ಕಾನೂನು ಅರಿವು–ನೆರವು, ತರಬೇತಿ, ಜಾಥಾ ಹಾಗೂ ಬೀದಿನಾಟಕಗಳ ಆಯೋಜನೆ, ಗೋಡೆ ಬರಹ, ಸ್ಟಿಕ್ಕರ್ ಹಾಗೂ ಕರಪತ್ರಗಳನ್ನು ಹಂಚಲು ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದರು.

‘ದಾಳಿಗಳಲ್ಲಿ ಪತ್ತೆಯಾದ ಬಾಲಕಾರ್ಮಿಕರನ್ನು ಬಾಲಮಂದಿರಗಳಿಗೆ, ವಸತಿ ಶಾಲೆಗಳಿಗೆ, ಮುಖ್ಯವಾಹಿನಿ ಶಾಲೆಗಳಲ್ಲಿ ಮಕ್ಕಳ ಅರ್ಹತೆಗೆ ಅನುಗುಣವಾಗಿ ದಾಖಲು ಮಾಡಲು, ಜೂನ್ ತಿಂಗಳೊಳಗೆ ಇನ್ನೂ ಶಾಲೆಗೆ ದಾಖಲಾಗದ ಮಕ್ಕಳ ವಿವರ ಪಡೆದು ಕ್ರಮ ವಹಿಸುವಂತೆ’ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಸೂಚಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್. ಸಂತೋಷ್, ಜಿ.ಪಂ. ಉಪಕಾರ್ಯದರ್ಶಿ ಸುಜಾತಾ, ಉಪವಿಭಾಗಾಧಿಕಾರಿ ಸತ್ಯನಾರಾಯಣ್, ಜಿಲ್ಲಾ ಕಾರ್ಮಿಕ ಅಧಿಕಾರಿ ವೇಣುಗೋಪಾಲ್, ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ರಘು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ಖಾನ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-42-972230732

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.