ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ ಬಿಟ್ಟ ಮಕ್ಕಳ ಕಡೆ ಗಮನ ಹರಿಸಿ: ನ್ಯಾ.ಮಂಜುನಾಥ ನಾಯಕ್

Published 12 ಜೂನ್ 2023, 13:26 IST
Last Updated 12 ಜೂನ್ 2023, 13:26 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಮಕ್ಕಳ ವಿಚಾರದಲ್ಲಿ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

‘ಬಾಲ ಕಾರ್ಮಿಕ ಪದ್ಧತಿಯು ಅಂತರರಾಷ್ಟ್ರೀಯ ಪಿಡುಗು. ಬಡತನ, ಶಿಕ್ಷಣ ಸೌಲಭ್ಯದ ಕೊರತೆ, ಪೋಷಕರ ಅನಾರೋಗ್ಯ ಹೀಗೆ ಹಲವಾರು ಕಾರಣಗಳಿಂದ ಬಾಲ ಕಾರ್ಮಿಕತೆ ಹೆಚ್ಚುತ್ತಿದೆ. ಬಡತನದಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳುಹಿಸುತ್ತಿದ್ದಾರೆ. ಕೆಲ ಕೈಗಾರಿಕೆಗಳು ಆಮಿಷ ತೋರಿಸಿ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ಳುತ್ತಿರುವುದನ್ನು ಕಾಣುತ್ತಿದ್ದೇವೆ. ಅದು ನಿಲ್ಲಬೇಕು’ ಎಂದರು.

‘ಮಕ್ಕಳು ದೇವರು ನೀಡಿದ ವರ. ಮಕ್ಕಳೇ ದೇಶದ ಆಧಾರಸ್ತಂಭ. ಇಂತಹ ಮಕ್ಕಳೆಡೆ ನಮ್ಮೆಲ್ಲರಿಗೆ ಸಾಮಾಜಿಕ ಹೊಣೆಗಾರಿಕೆ ಇದೆ. ಸೌಲಭ್ಯ ವಂಚಿತ ಮಕ್ಕಳು ಕಂಡುಬಂದಲ್ಲಿ ಅವರನ್ನು ಮುಖ್ಯವಾಹಿನಿಗೆ ತರಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎನ್.ಚಂದನ್ ತಿಳಿಸಿದ್ದಾರೆ. 

‘ಶಾಲೆ ಬಿಟ್ಟ ಮಕ್ಕಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ತಿಳಿಸಬೇಕು. ಆಗ ಮಕ್ಕಳನ್ನು ರಕ್ಷಿಸಿ ಮುಖ್ಯವಾಹಿನಿಗೆ ತರಲು ಸಹಕಾರಿಯಾಗುತ್ತದೆ’ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಿ.ಎಂ.ರೇಖಾ ಹೇಳಿದರು. 

‘ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ನಡೆದುಕೊಂಡು ಅವರಿಗೆ ಉತ್ತಮ ವಾತಾವರಣ ಕಲ್ಪಿಸಬೇಕು’ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್.ಎಸ್.ಸುಮಾ, ಕಾರ್ಮಿಕ ನಿರೀಕ್ಷಕ ಪಿ. ಭೀಮೇಶ್, ಬಿಇಓ ನಾಗರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT