ಹೊಳೆಹೊನ್ನೂರು: ಶಿವಮೊಗ್ಗ– ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಪುರಲೆ ಕೆರೆ ಏರಿ ಮೇಲೆ ಮಂಗಳವಾರ ಸಂಜೆ ಸರಣಿ ಅಪಘಾತದಲ್ಲಿ ಮೂರು ವಾಹನಗಳು ಜಖಂಗೊಂಡಿವೆ.

ಚಿತ್ರದುರ್ಗದಿಂದ ಶಿವಮೊಗ್ಗದತ್ತ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಸಂಸ್ಥೆ ಬಸ್ ಹಾಗೂ ಎದುರು ಬರುತ್ತಿದ್ದ ಕಾರ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಕಾರ್ ನುಜ್ಜುಗುಜ್ಜಾಗಿ ಎಡಬದಿ ರಸ್ತೆಗೆ ಅಡ್ಡಲಾಗಿ ನಿಂತಿದೆ. ಇದೇ ವೇಳೆ ಶಿವಮೊಗ್ಗದಿಂದ ಬೆಂಗಳೂರಿನತ್ತ ಹೋಗುತ್ತಿದ್ದ ಇನ್ನೊಂದು ಕಾರ್ಗೆ ಗುದ್ದಿದ ಪರಿಣಾಮ ಆ ಕಾರಿನ ಎಡಭಾಗ ಜಖಂಗೊಂಡಿದೆ. ಕಾರಿನ ಚಾಲಕನಿಗೆ ತೀವ್ರವಾಗಿದ್ದು ಸಮೀಪದ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ.

ಅಪಘಾತದಿಂದಾಗಿ ಕೆಲ ಹೊತ್ತು ರಸ್ತೆ ಸಂಚಾರಕ್ಕೆ ಅಡ್ಡಿಯಾಯಿತು. ಬಳಿಕ ಪೊಲೀಸರು ಸ್ಥಳಕ್ಕೆ ಬಂದು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-44-1980521676

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.