ಶಿವಮೊಗ್ಗ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ 1ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ. ಅಂದು ಇಲ್ಲಿನ ಅಲ್ಲಮಪ್ರಭು ಮೈದಾನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕರ್ನಾಟಕ ಪಬ್ಲಿಕ್ ಶಾಲೆ ಯೋಜನೆಗೆ ಚಾಲನೆ ನೀಡಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಶಿಕ್ಷಣ ಕ್ಷೇತ್ರದಲ್ಲಿ ಕೈಗೊಂಡ ಕ್ರಾಂತಿಕಾರಕ ಬದಲಾವಣೆಯ ಪ್ರತಿಬಿಂಬವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ’ ಎಂದು ಹೇಳಿದರು.

‘ಸಾರ್ವಜನಿಕರ ಅನುಕೂಲಕ್ಕಾಗಿ ಬಸ್, ಊಟದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಕಾರ್ಯಕ್ರಮದ ಉಸ್ತುವಾರಿಯನ್ನು ಹಿರಿಯ ಅಧಿಕಾರಿಗಳಿಗೆ ನೀಡಲಾಗಿದೆ. ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ಸಹಕರಿಸಬೇಕು’ ಎಂದು ತಿಳಿಸಿದರು.

ಹಕ್ಕುಪತ್ರ ವಿತರಣೆ: ಕಂದಾಯ ಇಲಾಖೆಯ ಇ– ಪೌತಿ ಖಾತೆ, ದರಖಾಸ್ತು ಪೋಡಿ, ಕಂದಾಯ ಗ್ರಾಮ ಹಕ್ಕುಪತ್ರಗಳು, ಪಿಂಚಣಿ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಇದೇ ವೇಳೆ ಫಲಾನುಭವಿಗಳಿಗೆ ವಿತರಣೆ ಮಾಡಲಿದ್ದಾರೆ. ಅಂಗವಿಕಲರಿಗೆ ಸವಲತ್ತುಗಳು, ಕಾರ್ಮಿಕರಿಗೆ ಸೌಲಭ್ಯ, ಕೃಷಿ ಮತ್ತು ತೋಟಗಾರಿಕೆ ಯಂತ್ರೋಪಕರಣಗಳು ಹಾಗೂ ಸಹಾಯಧನ ಆಧಾರಿತ ಸಾಲ-ಸೌಲಭ್ಯಗಳ ವಿತರಣೆ ಇದೇ ವೇಳೆ ನಡೆಯಲಿದೆ ಎಂದರು.

ಕಾರ್ಯಕ್ರಮದ ನೇತೃತ್ವವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಹಿಸಲಿದ್ದಾರೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎನ್. ಹೇಮಂತ್, ಎಸ್ಪಿ ಬಿ. ನಿಖಿಲ್, ಎಡಿಸಿ ವಿ.ಅಭಿಷೇಕ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-42-678208741

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.