ಶಿವಮೊಗ್ಗ: ‘ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಸಂಸತ್ನಲ್ಲಿ ಮಹಿಳಾ ಮೀಸಲು ವಿಧೇಯಕದ ವಿರುದ್ಧ ಮತ ಚಲಾಯಿಸಿ ಸೋಲಿಸುವ ಕೆಲಸ ಮಾಡಿವೆ. ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳಿಗೆ ಖಂಡಿತ ದೇಶದ ಮಹಿಳೆಯರ ಶಾಪ ತಟ್ಟಲಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

‘ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟದ ಈ ನಡೆ ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ಹೆಣ್ಣು ಭ್ರೂಣ ಹತ್ಯೆಗೆ ಸಮ. ಇದು ಮಹಿಳಾ ಕುಲಕ್ಕೆ ಮಾಡಿದ ದೊಡ್ಡ ಅಪಮಾನ. ಖಂಡಿತವಾಗಿಯೂ ಮುಂದಿನ ದಿನಗಳಲ್ಲಿ ದೇಶದ ಮಹಿಳೆಯರು ಪಾಠ ಕಲಿಸಲಿದ್ದಾರೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಮಹಿಳಾ ಮೀಸಲಾತಿ ವಿಧೇಯಕದಿಂದ ದಕ್ಷಿಣದ ರಾಜ್ಯಗಳಿಗೆ ಯಾವುದೇ ಹಾನಿ ಆಗುವುದಿಲ್ಲ. ಬದಲಿಗೆ ಕ್ಷೇತ್ರ ಪುನರ್ ವಿಂಗಡಣೆಯಿಂದ ಕರ್ನಾಟಕದಲ್ಲಿ ಪರಿಶಿಷ್ಟರಿಗೆ ಈಗಿರುವ ಲೋಕಸಭೆಯ 9 ಸ್ಥಾನಗಳ ಬದಲು 11 ಸ್ಥಾನಗಳು ಸಿಗಲಿವೆ. ಒಟ್ಟು ಸ್ಥಾನಗಳ ಸಂಖ್ಯೆ 28ರಿಂದ 42ಕ್ಕೆ ಹೆಚ್ಚಾಗಲಿವೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧಿಸುವ ಭರದಲ್ಲಿ ವಿರೋಧ ಪಕ್ಷಗಳು ದೇಶದ ಮಹಿಳೆಯರ ಹಿತ ಬಲಿಕೊಟ್ಟಿವೆ’ ಎಂದು ಟೀಕಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಮೋಹನ್ ರೆಡ್ಡಿ, ರಶ್ಮಿ ಶ್ರೀನಿವಾಸ್, ಸುರೇಖಾ ಮುರಳೀಧರ ಹಾಗೂ ಹರಿಕೃಷ್ಣ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-42-1940483905

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.