ಶನಿವಾರ, ಜುಲೈ 24, 2021
23 °C

ಮೂವರು ಪೊಲೀಸರು, ವೈದ್ಯ ವಿದ್ಯಾರ್ಥಿನಿ ಸೇರಿ 6 ಜನರಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಬೆಂಗಳೂರಿನಿಂದ ಹಿಂದಿರುಗಿದ್ದ ರಾಜ್ಯ ಮೀಸಲು ಪೊಲೀಸ್‌ ಪಡೆಯ (ಪಿ–2830) ಕಾನ್‌ಸ್ಟೆಬಲ್‌ ಒಬ್ಬರಿಂದ ಮೂವರು ಪೊಲೀಸರಿಗೆ ಸೋಂಕು ತಗುಲಿದೆ. 25 ವರ್ಷ (ಪಿ–6410), 21 ವರ್ಷ(ಪಿ–6412) ಹಾಗೂ 21 ವರ್ಷ(ಪಿ–6413)ದ ಮೂವರಿಗೆ ವೈರಸ್‌ ಇರುವುದು ದೃಢಪಟ್ಟಿದೆ. 

ಮೆಗ್ಗಾನ್‌ ಆಸ್ಪತ್ರೆ ಕೋವಿಡ್‌ ಕೇಂದ್ರದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ 24 ವರ್ಷದ ವೈದ್ಯ ವಿದ್ಯಾರ್ಥಿನಿಯೊಬ್ಬರಿಗೂ (ಪಿ–6411) ವೈರಸ್‌ ತಗುಲಿದೆ. ಮಹಾರಾಷ್ಟ್ರದಿಂದ ಬಂದ 34 ವರ್ಷದ ಪುರುಷ (ಪಿ–6414), 38 ವರ್ಷದ ಮತ್ತೊಬ್ಬ ಪುರುಷ (ಪಿ–6415) ಸೇರಿ ಶುಕ್ರವಾರ ಜಿಲ್ಲೆಯಲ್ಲಿ 6 ಪ್ರಕರಣ ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 89ಕ್ಕೇರಿದೆ.

ಚಿಕಿತ್ಸೆ ಪಡೆದು ಗುಣಮುಖರಾದ 12 ಜನರನ್ನು ಶುಕ್ರವಾರ ಮನೆಗೆ ಕಳುಹಿಸಲಾಯಿತು. ಇದುವರೆಗೂ 43 ಜನರು ಗುಣಮುಖರಾಗಿದ್ದು, 46 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಂಬತ್ತು ಭಾಗಗಳಲ್ಲಿ ಸೀಲ್‌ಡೌನ್ ಮಾಡಲಾಗಿದೆ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು