ಶುಕ್ರವಾರ, ಡಿಸೆಂಬರ್ 2, 2022
23 °C

ಶಿವಮೊಗ್ಗ ಗಲಭೆ: ಚೂರಿ ಇರಿತದ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ನಗರದಲ್ಲಿ ಸೋಮವಾರ ಬಟ್ಟೆ ಅಂಗಡಿ ಕೆಲಸಗಾರ ಪ್ರೇಮ್ ಸಿಂಗ್‌ಗೆ ಚೂರಿ ಇರಿದ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಮಾರ್ನಮಿಬೈಲು ನಿವಾಸಿ ಚರ್ಬಿ ಅಲಿಯಾಸ್ ಮೊಹಮ್ಮದ್ ಜಬಿ (30) ಗುಂಡೇಟು ಬಿದ್ದ ಆರೋಪಿ.

ಎನ್.ಟಿ.ರಸ್ತೆಯ ಫಲಕ್ ಪ್ಯಾಲೇಸ್ ಬಳಿ ಆರೋಪಿ ಇರುವ ಮಾಹಿತಿ ಅರಿತ ಪೊಲೀಸರ ತಂಡ ಮಂಗಳವಾರ ನಸುಕಿನಲ್ಲಿ ಬಂಧಿಸಲು ತೆರಳಿತ್ತು. ಈ ವೇಳೆ ಜಬಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ವಿನೋಬ‌ನಗರ ಠಾಣೆ ಪಿಎಸ್ ಐ ಮಂಜುನಾಥ ಕುರಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಗಾಯಗೊಂಡ ಅರೋಪಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಲತ್ರೆಗೆ ದಾಖಲಿಸಲಾಗಿದೆ.

ಪ್ರೇಮ್ ಸಿಂಗ್ ಮೇಲೆ ಚೂರಿ ಇರಿತದ ಪ್ರಕರಣದಲ್ಲಿ ಇಲ್ಲಿಯವರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.


ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಆರೋಪಿಗಳು (ರೆಹಮಾನ್ ಮತ್ತು ನದೀಮ್) 


 
ಶಿವಮೊಗ್ಗ ಗಲಭೆ: ಮೂರು ದಿನ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರಿ ನಿಷೇಧ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು