ಶನಿವಾರ, ಆಗಸ್ಟ್ 13, 2022
25 °C

ಶಿವಮೊಗ್ಗ: ಜಿಲ್ಲೆಯಲ್ಲಿ ಭಾರಿ ಮಳೆ, ಶಾಲಾ - ಕಾಲೇಜುಗಳಿಗೆ‌ ರಜೆ‌ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಅತಿ ಹೆಚ್ಚು ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 7ರಂದು ಗುರುವಾರ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ರಜೆ ಘೋಷಿಸಿದ್ದಾರೆ.

ಜಿಲ್ಲೆಯ ಸಾಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲ್ಲೂಕಿನ ಶಾಲೆಗಳಿಗೆ ಮಾತ್ರ ಬುಧವಾರ ರಜೆ ಘೋಷಿಸಲಾಗಿತ್ತು. ಗುರುವಾರ ಬೆಳಿಗ್ಗೆ ಈ ಆದೇಶ ಮಾರ್ಪಡಿಸಿರುವ ಜಿಲ್ಲಾಧಿಕಾರಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೂ ಅದನ್ನು ವಿಸ್ತರಿಸಿದ್ದಾರೆ.

ಮಳೆಯಿಂದಾಗಿ ಗಾಜನೂರಿನ ತುಂಗಾ ಜಲಾಶಯಕ್ಕೆ  ಒಳಹರಿವು ಹೆಚ್ಚಿದ್ದು, ಜಲಾಶಯದಿಂದ ನದಿಗೆ 45959 ಕ್ಯೂಸೆಕ್ ನೀರು ಹರಿಯಬಿಡಲಾಗಿದೆ. ಇದರಿಂದ ತುಂಗೆ ಭೋರ್ಗರೆಯುತ್ತಿದ್ದಾಳೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು