ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂಸ್ಥಿಕ ಕ್ವಾರಂಟೈನ್ ಅವಧಿ ಏಳೇ ದಿನ!

ಕೊರೊನಾ ಪೀಡಿತ ಸೂಕ್ಷ್ಮ ರಾಜ್ಯಗಳಿಂದ ಬರುವವರಿಗೆ ಅನ್ವಯ
Last Updated 28 ಮೇ 2020, 12:30 IST
ಅಕ್ಷರ ಗಾತ್ರ

ಶಿವಮೊಗ್ಗ: ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ಕೊರೊನಾ ಪೀಡಿತ ಸೂಕ್ಷ್ಮ ರಾಜ್ಯಗಳಿಂದಬರುವವರು 14 ದಿನಗಳ ಬದಲು ಕೇವಲ7 ದಿನಗಳ ಸಾಂಸ್ಥಿಕ ಕ್ವಾರೆಂಟೈನ್ ಪೂರ್ಣಗೊಳಿಸಿದರೆ ಸಾಕು ಅವರು ಮನೆಗೆ ತೆರಳಬಹುದು. ಉಳಿದ 7 ದಿನ ಮನೆಯಲ್ಲೇ ಕ್ವಾರಂಟೈನ್‌ನಲ್ಲಿ ಇರಬಹುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದಆರೋಗ್ಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಇದುವರೆಗೆ ಹೊರ ರಾಜ್ಯಗಳಿಂದ ಬಂದವರಿಗೆ 14 ದಿನಗಳ ಸಾಂಸ್ಥಿಕ ಕ್ವಾರೆಂಟೈನ್ ವಿಧಿಸಲಾಗುತ್ತಿತ್ತು.ಹೊಸ ಮಾರ್ಗಸೂಚಿಗಳ ಪ್ರಕಾರ7 ದಿನಗಳಿಗೆ ಇಳಿಸಲಾಗಿದೆ. ಪ್ರಸ್ತುತ ವಿವಿಧ ಹಾಸ್ಟೆಲ್‍ಗಳಲ್ಲಿ 553ಜನರುಕ್ವಾರೆಂಟೈನ್‍ನಲ್ಲಿದ್ದಾರೆ. ಪ್ರತಿ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ 7 ದಿನಗಳ ಅವಧಿ ಪೂರ್ಣಗೊಳಿಸಿರುವವರ ಆರೋಗ್ಯ ತಪಾಸಣೆ ನಡೆಸಬೇಕು.ಕೈಗೆ ಸೀಲು ಹಾಕಿ ಮನೆಯ ಕ್ವಾರೆಂಟೈನ್‍ಗೆ ಕಳುಹಿಸಬೇಕು. ಅದಕ್ಕಾಗಿ ಪ್ರತಿ ತಾಲ್ಲೂಕಿಗೂ ಒಬ್ಬರುನೋಡಲ್ ಅಧಿಕಾರಿ ನೇಮಕ ಮಾಡಬೇಕು ಎಂದು ಸೂಚಿಸಿದರು.

ಭವಿಷ್ಯದಲ್ಲಿ ಹೋಂ ಕ್ವಾರೆಂಟೈನ್‍ಗೆ ಒಳಗಾಗುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಅಂಥವರ ಮೇಲೆ ನಿರಂತರ ನಿಗಾ ಇರಿಸಬೇಕು. ಪಟ್ಟಿಸಿದ್ಧಪಡಿಸಿ ಪಿಡಿಒ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳಿಗೆ ಕಳುಹಿಸಬೇಕು. ಕೊರೊನಾ ಹೆಚ್ಚಳವಾಗಿರುವ ರಾಜ್ಯಗಳಿಂದ ಬರುವವರನ್ನು ಹೊರತುಪಡಿಸಿ, ಇತರೆ ರಾಜ್ಯಗಳಿಂದ ಬರುವವರನ್ನು ನೇರವಾಗಿ ಮನೆಗೇ ಕಳುಹಿಸಿ,ಕ್ವಾರೆಂಟೈನ್‍ಗೆ ಒಳಪಡಿಸಬೇಕು. ಅವರ ಮೇಲೆಕಟ್ಟುನಿಟ್ಟಿನ ನಿಗಾ ವಹಿಸಬೇಕು. ಹೊಸ ಮಾರ್ಗಸೂಚಿ ಪ್ರಕಾರ ಪ್ರಾಥಮಿಕ ಸಂಪರ್ಕಇರುವವರನ್ನೂ ಹೋಂ ಕ್ವಾರೆಂಟೈನ್‍ಗೆ ಒಳಪಡಿಸಬೇಕು.ಕ್ವಾರೆಂಟೈನ್ ವಿಧಿಸುವ ಮೊದಲು ಕ್ವಾರೆಂಟೈನ್ ವಾಚ್ಆ್ಯಪ್‌ಡೌನ್‍ಲೋಡ್ ಮಾಡಲುಸೂಚಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ,ಹೆಚ್ಚುವರಿಜಿಲ್ಲಾಧಿಕಾರಿ ಜಿ.ಅನುರಾಧ,ವೈದ್ಯಕೀಯ ಕಾಲೇಜುನಿರ್ದೇಶಕ ಡಾ.ಗುರುಪಾದಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಜಿಲ್ಲಾ ಸರ್ವೇಕ್ಷಾಧಿಕಾರಿ ಡಾ.ಶಂಕ್ರಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT