ಶಿಕಾರಿಪುರ: ‘ಪರಿಭಾವಿತ (ಡೀಮ್ಡ್) ಅರಣ್ಯ ಕುರಿತ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಮುನ್ನ ರೈತರು ಈಗಾಗಲೇ ಕೃಷಿ ಚಟುವಟಿಕೆ ನಡೆಸುತ್ತಿರುವ ಪ್ರದೇಶವನ್ನು ಗಮನದಲ್ಲಿ ಇಟ್ಟುಕೊಂಡು ಪ್ರಸ್ತಾವ ಸಿದ್ಧಪಡಿಸಬೇಕು’ ಎಂದು ಸಂಸದ ಬಿ.ವೈ.ರಾಘವೇಂದ್ರ ಸೂಚಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಅರಣ್ಯ, ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಪರಿಭಾವಿತ ಅರಣ್ಯ ಪ್ರದೇಶದ ವ್ಯಾಪ್ತಿ ಕುರಿತು ಈಗಾಗಲೇ ಸಿದ್ಧಪಡಿಸಿರುವ ವರದಿಯನ್ನು ಸರ್ಕಾರ ಪುನಃ ಪರಿಶೀಲನೆಗೆ ಕಳುಹಿಸಿದೆ. ಇದೀಗ ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಲು ಅವಕಾಶ ಇದ್ದು, ಈ ಸಂದರ್ಭದಲ್ಲಿ ಅಭಿವೃದ್ಧಿ ಗಮನದಲ್ಲಿ ಇಟ್ಟುಕೊಳ್ಳಬೇಕು. ಗೋಮಾಳ ಪ್ರದೇಶ ಸೇರಿಸುವುದು ಸರಿಯಲ್ಲ. ಈಗಾಗಲೇ ಜನಸಂಖ್ಯೆ ಹೆಚ್ಚಿರುವ ಪ್ರದೇಶ, ಕೃಷಿ ಚಟುವಟಿಕೆ ಪ್ರದೇಶ ಸೇರಿಸಿದರೆ ಜನರಿಗೆ ತೊಂದರೆ ಆಗುತ್ತದೆ. ಅರಣ್ಯೇತರ ಚಟುವಟಿಕೆ ನಡೆಸಲು ಆಗುವುದಿಲ್ಲ. ಈ ಎಲ್ಲ ಅಂಶ ಗಮನದಲ್ಲಿ ಇಟ್ಟುಕೊಂಡು ಪ್ರಸ್ತಾವ ಸಲ್ಲಿಸಬೇಕು’ ಎಂದರು.

‘ಈ ಹಿಂದಿನ ಡೀಮ್ಡ್ ಅರಣ್ಯ ಪ್ರಸ್ತಾವದಲ್ಲಿ ಗ್ರಾಮಗಳು, ಈಗಾಗಲೇ ಸಾಗುವಳಿ ಪಡೆದಿರುವ ಕೃಷಿ ಪ್ರದೇಶ ಇದ್ದು, ಅದನ್ನು ಪುನರ್ ಪರಿಶೀಲನೆ ಮಾಡಬೇಕು ಎನ್ನುವ ಮಲೆನಾಡು ಭಾಗದ ಶಾಸಕರ ಒತ್ತಡಕ್ಕೆ ಸರ್ಕಾರ ಮಣಿದಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಕಾನೂನು ಪಾಲನೆ ಜತೆ ಜನಹಿತಕ್ಕೂ ಆದ್ಯತೆ ನೀಡಬೇಕು’ ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.

ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ತಹಶೀಲ್ದಾರ್ ವಾಣಿ, ಎಸಿಎಫ್ ರವೀಂದ್ರನಾಯ್ಕ, ಆರ್ಎಫ್ಒ ಪರಶುರಾಮ್, ಮೂರು ಅರಣ್ಯ ವಲಯಗಳ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-42-1644795330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.