ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೊಗ್ಗ | ಡೆಂಗಿ ನಿಯಂತ್ರಣ; ಪರಿಣಾಮಕಾರಿ ಕ್ರಮಕ್ಕೆ ಚನ್ನಬಸಪ್ಪ ಸೂಚನೆ

-
Published 11 ಜುಲೈ 2024, 13:35 IST
Last Updated 11 ಜುಲೈ 2024, 13:35 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಡೆಂಗಿ ಪ್ರಕರಣಗಳು ನಿತ್ಯ ಉಲ್ಬಣಗೊಳ್ಳುತ್ತಿವೆ. ಅದನ್ನು ಗಂಭೀರವಾಗಿ ಪರಿಗಣಿಸಿ, ನಿಯಂತ್ರಿಸಲು ಅಧಿಕಾರಿಗಳು ಪರಿಣಾಮಕಾರಿ ಕ್ರಮಗಳ ಕೈಗೊಳ್ಳಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬುಧವಾರ ಡೆಂಗಿ ನಿಯಂತ್ರಣದ ಕುರಿತಾದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಡೆಂಗಿ ಪ್ರಕರಣ ಹೆಚ್ಚಾಗದಂತೆ ಕಟ್ಟೆಚ್ಚರ ವಹಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಡಿಎಚ್‍ಒ ಡಾ.ನಟರಾಜ್ ಮಾತನಾಡಿ, ‘ಶಿವಮೊಗ್ಗ ನಗರದಲ್ಲಿ 471 ಜನರಿಗೆ ಡೆಂಗಿ ಪರೀಕ್ಷೆ ಮಾಡಲಾಗಿದೆ. 54 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ವಾರ್ಡ್‌ಗಳಲ್ಲಿ ಲಾರ್ವಾ ಸಮೀಕ್ಷೆ ನಡೆಸಲಾಗುತ್ತಿದೆ. ಪ್ರತಿ ಶುಕ್ರವಾರ ಡ್ರೈಡೇ ಆಚರಿಸಲಾಗುತ್ತಿದೆ. ಆಶಾ ಕಾರ್ಯಕರ್ತರು, ಸ್ಥಳೀಯರು, ವೈದ್ಯಕೀಯ ವಿದ್ಯಾರ್ಥಿಗಳನ್ನು ಬಳಸಿಕೊಂಡು ಸರ್ವೆ ಕಾರ್ಯ ಮಾಡಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಸೊಳ್ಳೆಗಳ ನಿಯಂತ್ರಿಸಲು ಫಾಗಿಂಗ್ ಮಾಡಲಾಗುತ್ತಿದೆ. ಡೆಂಗಿ ನಿಯಂತ್ರಣದಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಿದೆ’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಎಸ್.ಎನ್.ಚನ್ನಬಸಪ್ಪ, ‘ಸೊಳ್ಳೆ ನಿಯಂತ್ರಿಸಲು ನಗರದ 35 ವಾರ್ಡ್‍ಗಳಲ್ಲಿ ಫಾಗಿಂಗ್ ಕಾರ್ಯ ಬೇಗನೇ ಮಾಡಲು ಮಹಾನಗರ ಪಾಲಿಕೆ ಆಯುಕ್ತರು ಹೆಚ್ಚಿನ ಗಮನ ನೀಡಬೇಕು. ಆರೋಗ್ಯದ ವಿಷಯದಲ್ಲಿ ಖರ್ಚು ಮಾಡಲು ಹಿಂದೇಟು ಹಾಕಬಾರದು’ ಎಂದು ಸೂಚಿಸಿದರು.

ಪಾಲಿಕೆ ಆಯುಕ್ತೆ ಡಾ.ಕವಿತಾ ಯೋಗಪ್ಪನವರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT