ಶಿವಮೊಗ್ಗ: ‘ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಆಚರಣೆ ಪ್ರಯುಕ್ತ ಜಿಲ್ಲೆಯಾದ್ಯಂತ ಫೆ. 10ರಂದು 1ರಿಂದ 19 ವರ್ಷದವರಿಗೆ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಎಲ್ಲ ಅರ್ಹರಿಗೂ ಈ ಮಾತ್ರೆಗಳನ್ನು ಕಡ್ಡಾಯವಾಗಿ ನೀಡಬೇಕು’ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತದ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಂತು ಹುಳು ಇರುವ ಮಕ್ಕಳು ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದ ಬಳಲುತ್ತಾರೆ. ಅದರಿಂದ ಅವರ ದೈಹಿಕ, ಮಾನಸಿಕ ಬೆಳವಣಿಗೆ ಕುಂಠಿತವಾಗಿ ಶೈಕ್ಷಣಿಕ ಬೆಳವಣಿಗೆ ಸಹ ಕಡಿಮೆಯಾಗುತ್ತದೆ. ಆದ್ದರಿಂದ ನಿಗದಿತ ವಯೋಮಾನದವರು ಜಂತು ಹುಳು ನಿವಾರಣೆ ಮಾತ್ರೆಗಳನ್ನು ತೆಗೆದುಕೊಳ್ಳಬೇಕು’ ಎಂದರು.

ಫೆ. 10ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ– ಕಾಲೇಜುಗಳಲ್ಲಿ ಉಚಿತವಾಗಿ ಅಲ್ಬೆಂಡಝೋಲ್ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡಲಾಗುವುದು. ಅಂದು ಬಾಕಿ ಉಳಿದ ಮಕ್ಕಳಿಗೆ ಫೆ. 16ರಂದು ನೀಡಲಾಗುವುದು. ಮಾತ್ರೆಗಳನ್ನು ನೀಡಲು ಕಾರ್ಯಕರ್ತೆಯರಿಗೆ, ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಕಡ್ಡಾಯವಾಗಿ ಎಲ್ಲ ಅರ್ಹ ಮಕ್ಕಳು ಮಾತ್ರೆ ತೆಗೆದುಕೊಳ್ಳಬೇಕು. ಜೊತೆಗೆ ಶಾಲೆಗಳಲ್ಲಿ ಕೈ ತೊಳೆಯುವುದು ಸೇರಿದಂತೆ ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕು. ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಪೋಷಕರಿಗೆ ಮಾತ್ರೆ ನೀಡುವ ಬಗ್ಗೆ ತಿಳಿಸಬೇಕು’ ಎಂದು ಹೇಳಿದರು.

ಆರ್ಸಿಎಚ್ಒ ಡಾ.ಮಲ್ಲಪ್ಪ ಮಾತನಾಡಿ, ‘ಮಣ್ಣಿನ ಮೂಲಕ ಹರಡುವ ಜಂತುಹುಳು ಬಾಧೆಯಿಂದಾಗಿ ವ್ಯಕ್ತಿಯ ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯ ಕುಗ್ಗಿ ಆರ್ಥಿಕ ಪ್ರಗತಿಗೆ ಅಡ್ಡಿಯುಂಟಾಗುತ್ತದೆ. ಆದ್ದರಿಂದ ಎಲ್ಲ ಮಕ್ಕಳು ಜಂತು ಹುಳು ನಿವಾರಣೆ ಮಾತ್ರೆ ತೆಗೆದುಕೊಳ್ಳಬೇಕು’ ಎಂದು ತಿಳಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್, ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್, ಎಸ್ಪಿ ಬಿ.ನಿಖಿಲ್, ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಅಭಿಷೇಕ್, ಡಿಎಚ್ಒ ಡಾ. ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಡಿಡಿಪಿಐ ಮಂಜುನಾಥ್ ಹಾಜರಿದ್ದರು.

ಶಾಲಾ ಶಿಕ್ಷಕರು ಸಿಡಿಪಿಒ ಆಶಾ ಅಂಗನವಾಡಿ ಕಾರ್ಯಕರ್ತೆಯರು ಜಂತುಹುಳು ನಿವಾರಣಾ ದಿನದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು. ಈ ಕಾರ್ಯಕ್ರಮ ಶೇ 100ರಷ್ಟು ಯಶಸ್ವಿಯಾಗಲು ಸಹಕರಿಸಬೇಕು
ಪ್ರಭುಲಿಂಗ ಕವಳಿಕಟ್ಟಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.