ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ವಿರುದ್ಧ ಹೋರಾಟಕ್ಕೆ ಶಿವಮೊಗ್ಗ ಜಿಲ್ಲೆ ಸಜ್ಜು: ಕೆ.ಎಸ್.ಈಶ್ವರಪ್ಪ

Last Updated 3 ಸೆಪ್ಟೆಂಬರ್ 2021, 14:39 IST
ಅಕ್ಷರ ಗಾತ್ರ

ಶಿವಮೊಗ್ಗ: ಕೋವಿಡ್‌ ವಿರುದ್ಧ ಹೋರಾಟಕ್ಕೆ ಜಿಲ್ಲೆ ಸಂಪೂರ್ಣ ಸಜ್ಜಾಗಿದೆ. ಮೂವತ್ತು ಅಲೆ ಬಂದರೂ ಹೆದರುವುದಿಲ್ಲ ಎಂದು ಜಿಲ್ಲಾ ಉಸ್ತವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಮೆಗ್ಗಾನ್‌ ಆಸ್ಪತ್ರೆಯಲ್ಲಿ ಶುಕ್ರವಾರ ಅನಿವಾಸಿ ಭಾರತೀಯ ಭೂಪಾಳಂ ಕುಟುಂಬ ರೋಟರಿ ಮೂಲಕ ನೀಡಿರುವ ₹ 5 ಕೋಟಿ ಮೌಲ್ಯದ ಸಲಕರಣೆಗಳ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾಕಷ್ಟು ಪ್ರಮಾಣದ ಔಷಧ, ಸಲಕರಣೆಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಲಸಿಕೆ ನೀಡುವ ಪ್ರಕ್ರಿಯೆಯೂ ಚುರುಕುಗೊಂಡಿದೆ. ದಾನಿಗಳ ಮಾನವೀಯ ಸ್ಪಂದನೆಯಿಂದ ಕೋಟ್ಯಂತರ ಮೌಲ್ಯದ ಸಲಕರಣೆಗಳು ಬಂದಿವೆ. ವೆಂಟಿಲೇಟರ್, ಆಮ್ಲಜನಕ ಕನ್ಸನ್‌ಟ್ರೇಟರ್‌ ಸೇರಿವೆ. ಇಂತಹ ಪ್ರಯತ್ನಗಳ ಫಲವಾಗಿ ಮೆಗ್ಗಾನ್ ರಾಜ್ಯದಲ್ಲೇ ಆಸ್ಪತ್ರೆ ಚಿಕಿತ್ಸೆ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದರು.

ಡಾ.ಪಿ.ನಾರಾಯಣ ಪ್ರಾಸ್ತಾವಿಕ ಮಾತನಾಡಿದರು. ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಸಿದ್ದಪ್ಪ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಜಿಲ್ಲಾ ಶಸ್ತ್ರಚಕಿತ್ಸಕ ಡಾ.ಸಿದ್ಧನಗೌಡ, ಸಿಎಒ ಶಿವಕುಮಾರ್, ಆರ್‌ಎಸ್‌ಎಸ್ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿ ರಾಮ, ಭೂಪಾಳಂ ಕುಟುಂಬದ ನಾಗಾರ್ಜುನ, ಕಿಶೋರ್ ಶೀರ್ನಾಳಿ, ಎಂ.ಜಿ.ರಾಮಚಂದ್ರಮೂರ್ತಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT