ಶಿವಮೊಗ್ಗ: ಬೇಸಿಗೆಯಲ್ಲಿ ಶಿವಮೊಗ್ಗ ನಗರದಲ್ಲಿ 20ರಿಂದ 30 ಕಡೆ ಹಾಗೂ ಸೊರಬದಲ್ಲಿ ಸ್ವಲ್ಪ ಕಡೆ ಕುಡಿಯುವ ನೀರಿನ ತೊಂದರೆ ಆಗಬಹುದು ಎಂದು ಗುರುತಿಸಲಾಗಿದೆ. ಜಿಲ್ಲಾಧಿಕಾರಿ ಖಾತೆಯಲ್ಲಿ ಹಣವಿದ್ದು, ಸಮಸ್ಯೆ ನಿವಾರಣೆಗೆ ಟ್ಯಾಂಕರ್ ನೀರು ಪೂರೈಕೆ, ಕೊಳವೆ ಬಾವಿಗಳ ವಶಪಡಿಸಿಕೊಳ್ಳುವಿಕೆ ಸೇರಿದಂತೆ ಪರ್ಯಾಯ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮುಂಗಾರು ಪೂರ್ವ ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದರೆ ಸೊರಬ ಸೇರಿದಂತೆ ಜಿಲ್ಲೆಯ ಹಲವೆಡೆ ಮನೆಗಳ ಹೆಂಚು ಹಾರಿ ಹೋಗಿದ್ದು, ಮರಗಳು ಬುಡಮೇಲಾಗಿ ಹಾನಿ ಸಂಭವಿಸಿದೆ. ತೊಂದರೆಗೀಡಾದವರಿಗೂ ತುರ್ತಾಗಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಾರದ ಹಿಂದೆ ಜಿಲ್ಲಾಧಿಕಾರಿ, ಸಿಇಒ ಸಭೆ ಕರೆದು ಅವರಿಗೆ ಅಗತ್ಯ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಕೆಎಫ್ಡಿಯಿಂದ ಜಿಲ್ಲೆಯ ಹೊಸನಗರ, ಸಾಗರದಲ್ಲಿ ತಲಾ ಒಬ್ಬರು, ತೀರ್ಥಹಳ್ಳಿಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. 104 ಪಾಸಿಟಿವ್ ಪ್ರಕರಣ ಬಂದಿದ್ದು, ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡಲು ವಿಶೇಷ ವಾರ್ಡ್, ಹಾಸಿಗೆ ಮೀಸಲಿಡಲಾಗಿದೆ. ಮಲೆನಾಡಿನಲ್ಲಿ ಕಾಡಿನ ಉತ್ಪನ್ನಗಳ ಸಂಗ್ರಹಿಸಲು ಹೋಗುವವರಿಗೆ ಹಾಗೂ ತೋಟಗಳಿಗೆ ತೆರಳುವವರಿಗೆ ಡೆಪಾ ತೈಲ ವಿತರಣೆ ಮಾಡಲಾಗಿದೆ. ಹೀಗಾಗಿ ಸಾರ್ವಜನಿಕರು ಆತಂಕಕ್ಕೀಡಾಗುವ ಅಗತ್ಯವಿಲ್ಲ. ಜ್ವರ ಬಂದಲ್ಲಿ ರಕ್ತ ಪರೀಕ್ಷೆ ಮಾಡಿಸಬೇಕು ಎಂದು ಮನವಿ ಮಾಡಿದರು.

ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಕಾಮಗಾರಿ ಆಗಸ್ಟ್ಗೆ ಮುಂಚಿತವಾಗಿಯೇ ಮುಗಿಸಿಕೊಡುವುದಾಗಿ ಗುತ್ತಿಗೆದಾರ ಹೇಳಿದ್ದಾರೆ. ಶಿವಮೊಗ್ಗ–ಬೆಂಗಳೂರು ನಡುವಿನ ಇಂಡಿಗೊ ವಿಮಾನ ಹಾರಾಟ ಮೇ 1ರಿಂದ ಸ್ಥಗಿತಗೊಳ್ಳದಂತೆ ನೋಡಿಕೊಳ್ಳಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ವಕ್ತಾರ ಜಿ.ಡಿ. ಮಂಜುನಾಥ್, ಜವಳಿ ಅಭಿವೃದ್ಧಿ ನಿಗಮದ ಕೆ.ಚೇತನ್ಗೌಡ, ಪ್ರಮುಖರಾದ ಕಲಿಂ ಪಾಷಾ, ಶಿವಕುಮಾರ್, ಶಿವಣ್ಣ, ಸಿದ್ದಪ್ಪ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-42-193206852

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.