ಶಿವಮೊಗ್ಗ: ನಗರದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಶನಿವಾರ ಬಂಧಿಸಿದ್ದಾರೆ.

ಹೊಳೆಹೊನ್ನೂರು ಸಮೀಪದ ಜಾವಳ್ಳಿಯ ಪಿ.ಅಶೋಕ (28) ಹಾಗೂ ಚಿಕ್ಕಮರಡಿಯ ರಾಕೇಶ್ (20) ಬಂಧಿತರು.

ರಾಜೀವ್ ಗಾಂಧಿ ಬಡಾವಣೆಯ ಕಂಟ್ರಿ ಕ್ಲಬ್ ರಸ್ತೆಯ ಬಳಿ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಬಾಬು ಆಂಜನಪ್ಪ ಹಾಗೂ ಇನ್ಸ್ಪೆಕ್ಟರ್ ಹರೀಶ್ ಕೆ.ಪಟೇಲ್ ಅವರನ್ನೊಳಗೊಂಡ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದೆ.

ಆರೋಪಿಗಳಿಂದ ₹1 ಲಕ್ಷ ಮೌಲ್ಯದ 1.67 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಲಾಗಿದ್ದ ಒಂದು ಕಾರು ಹಾಗೂ ಗಾಂಜಾ ಮಾರಾಟದಿಂದ ಬಂದಿದ್ದ ₹3,290 ನಗದು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-42-64417199

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.