ಶಿವಮೊಗ್ಗ: ‘ರಾಜ್ಯ ಸರ್ಕಾರ ವಿದ್ಯುತ್ ವಿತರಣೆ ಜವಾಬ್ದಾರಿಯನ್ನು ಟಾಟಾ ಪವರ್ ಕಂಪನಿಗೆ ವಹಿಸುತ್ತಿರುವುದು ರೈತ ವಿರೋಧಿ ಕ್ರಮವಾಗಿದೆ. ಇದನ್ನು ವಿರೋಧಿಸುತ್ತೇವೆ’ ಎಂದು ರಾಜ್ಯ ರೈತ ಸಂಘ, ಹಸಿರು ಸೇನೆಯ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು.

‘ಸಾವಿರಾರು ಕೋಟಿ ಮೌಲ್ಯದ ವಿತರಣಾ ಜಾಲ, ಉಪಕೇಂದ್ರ, ಯಂತ್ರೋಪಕರಣ, ಬೃಹತ್ ಸೌಕರ್ಯ ಹೊಂದಿರುವ ಕರ್ನಾಟಕ ವಿದ್ಯುತ್ ನಿಗಮ ಸಾರ್ವಜನಿಕ ಆಸ್ತಿಯಾಗಿದೆ. ಈಗಿರುವ ವಿದ್ಯುತ್ ಕಂಪನಿಗಳು ಮತ್ತು ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೂ ಈಗಿರುವ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗಿಯವರಿಗೆ ವಹಿಸುತ್ತಿರುವುದೇಕೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

‘ರಾಜ್ಯದ ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ಕಂಪನಿಗಳ ವ್ಯಾಪ್ತಿಯ 19 ಜಿಲ್ಲೆಗಳ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸಲು ಸರ್ಕಾರ ಮುಂದಾಗಿದೆ. ಅದಕ್ಕೆ ಜೂನ್ 20ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರ ಸಾರ್ವಜನಿಕ ಪ್ರಕಟಣೆ ನೀಡಿದೆ. ಮುಂಬೈ, ದೆಹಲಿಯಲ್ಲಿ ಖಾಸಗಿಯವರು ಪ್ರತಿ ಯೂನಿಟ್ಗೆ ₹14ರವರೆಗೂ ದುಬಾರಿ ದರ ನಿಗದಿ ಮಾಡಿದ್ದಾರೆ. ಈಗ ರಾಜ್ಯದಲ್ಲಿ ಸರಾಸರಿ ಯೂನಿಟ್ಗೆ ₹6.50 ಇದೆ. ಒಡಿಶಾದಲ್ಲಿ ಖಾಸಗಿ ಕಂಪನಿಯೊಂದು ನಿರ್ವಹಣೆ ಮಾಡಲು ಸಾಧ್ಯವಾಗದೇ ಅರ್ಧದಲ್ಲೆ ಬಿಟ್ಟು ಹೋಗಿದೆ’ ಎಂದರು.

‘ಖಾಸಗಿಯವರಿಗೆ ನಿರ್ವಹಣೆಯ ಹೊಣೆ ವಹಿಸಿದಲ್ಲಿ ಈಗ ರೈತರಿಗೆ ಉಚಿತವಾಗಿ ಕೊಡುತ್ತಿರುವ ಐಪಿ ಸೆಟ್, ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆಗಳು ರದ್ದಾಗಲಿವೆ. ಈಗಿರುವ ನೌಕರರು ಕೆಲಸ ಕಳೆದುಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ರೈತ ಸಂಘದ ಪ್ರಮುಖರಾದ ಕೆ.ರಾಘವೇಂದ್ರ, ಹಿಟ್ಟೂರು ರಾಜು, ಭಾಗ್ಯ ರಾಘವೇಂದ್ರ, ಕಸಟ್ಟಿ ರುದ್ರೇಶ್, ಸಿ.ಚಂದ್ರಪ್ಪ, ಇ.ಬಿ.ಜಗದೀಶ್, ಶೇಖರಪ್ಪ, ಮಹೇಶ್, ಹರೀಶ್ ಉಪಸ್ಥಿತರಿದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-42-1286054204

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.