ಶಿವಮೊಗ್ಗ: ‘ಜಿಲ್ಲೆಯ ಬಗರ್ಹುಕುಂ ಸಾಗುವಳಿದಾರರು ಮತ್ತು ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹರಿಸದೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವ ಮುಖ ಇಟ್ಟುಕೊಂಡು ಶಿವಮೊಗ್ಗಕ್ಕೆ ಬರುತ್ತಾರೆ’ ಎಂದು ಮಲೆನಾಡು ರೈತ ಹೋರಾಟ ಸಮಿತಿಯ ಸಂಚಾಲಕ ತೀ.ನಾ. ಶ್ರೀನಿವಾಸ್ ಪ್ರಶ್ನಿಸಿದರು.

‘ಜಿಲ್ಲೆಯಲ್ಲಿ ರೈತರ ಸಮಸ್ಯೆಗಳು ರಾಶಿ ಇದ್ದರೂ ಸರ್ಕಾರ ಯಾವುದೇ ಸ್ಪಂದನೆ ನೀಡಿಲ್ಲ. ವಿಶೇಷವಾಗಿ ಶರಾವತಿ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗಳು ಇಂದಿಗೂ ಬಗೆಹರಿಯದೇ ಉಳಿದಿವೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘2022ರ ವಿಧಾನಸಭೆ ಚುನಾವಣೆಗೆ ಮುನ್ನ ಸಚಿವ ಮಧು ಬಂಗಾರಪ್ಪ ಅವರು ಶರಾವತಿ ಸಂತ್ರಸ್ತರು ಹಾಗೂ ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಿ ಆಯನೂರಿನಿಂದ ಶಿವಮೊಗ್ಗದವರೆಗೆ ಪಾದಯಾತ್ರೆ ನಡೆಸಿದ್ದರು. ಅದಕ್ಕೂ ಮೊದಲು ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಮಲೆನಾಡು ರೈತರ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ ರಚಿಸಿದ್ದರು. ಆ ಸಮಿತಿಯಲ್ಲಿ ನಾನೂ ಸದಸ್ಯನಾಗಿದ್ದೆ. ಶಿವಮೊಗ್ಗದಲ್ಲಿ ನಡೆದ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಸುಮಾರು 10 ಸಾವಿರ ರೈತರ ಎದುರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು’ ಎಂದು ಹೇಳಿದರು.

‘ಸುಪ್ರೀಂ ಕೋರ್ಟ್ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಸರ್ಕಾರ ಕೈಕಟ್ಟಿ ಕುಳಿತಿದೆ. ಜಿಲ್ಲೆಯಲ್ಲಿ ಅಂದಾಜು 50,000 ಜನರ ಹಕ್ಕುಪತ್ರ ರದ್ದುಗೊಳಿಸಲು ಪ್ರಕರಣ ದಾಖಲಾಗಿದೆ. ರೈತರು ಆತಂಕದಲ್ಲಿ ಜೀವನ ಸಾಗಿಸುತ್ತಿದ್ದಾರೆ’ ಎಂದರು.

‘ಶರಾವತಿ, ಅಂಬ್ಲಿಗೊಳ, ಚಕ್ರಾ, ವರಾಹಿ ಹಾಗೂ ಸಾವೇಹಕ್ಲು ಅಣೆಕಟ್ಟು ನಿರ್ಮಾಣಕ್ಕಾಗಿ ಭೂಮಿ ನೀಡಿದ ರೈತರ ಪರಿಸ್ಥಿತಿ ಇಂದು ಶೋಚನೀಯವಾಗಿದೆ. ಸರ್ಕಾರಕ್ಕಾಗಿ ಭೂಮಿ ಬಿಟ್ಟುಕೊಟ್ಟ ರೈತರ ಮೇಲೆಯೇ ಪ್ರಕರಣ ದಾಖಲಿಸಿರುವುದು ಅನ್ಯಾಯ. ಜಿಲ್ಲೆಯಲ್ಲಿ ಗೋಮಾಳ, ಹುಲ್ಲುಬನಿ, ಕಾನು ಪ್ರದೇಶಗಳನ್ನೂ ಅರಣ್ಯ ಪ್ರದೇಶವೆಂದು ಘೋಷಿಸಲಾಗಿದೆ’ ಎಂದು ಆರೋಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-42-952925499

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.