ಶಿವಮೊಗ್ಗ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಯೂರಿಯಾ ಹಾಗೂ ಡಿಎಪಿ ಸೇರಿ ರಸಗೊಬ್ಬರದ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಎಚ್.ಆರ್. ಬಸವರಾಜಪ್ಪ ಆಗ್ರಹಿಸಿದರು.

‘ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯಿಂದ ಯುರಿಯಾ ಹಾಗೂ ಡಿಎಪಿ ಗೊಬ್ಬರಗಳ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ವಿದೇಶಗಳಿಂದ ಬರುತ್ತಿದ್ದ ಕಚ್ಚಾ ವಸ್ತುಗಳ ಕೊರತೆಯಿಂದ ಗೊಬ್ಬರ ಉತ್ಪಾದನೆಯೂ ಕುಂಠಿತಗೊಂಡಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಮುಂಗಾರು ಹಂಗಾಮಿನಲ್ಲಿ ದೇಶಕ್ಕೆ ಅಂದಾಜು ಎರಡು ಕೋಟಿ ಟನ್ ಯೂರಿಯಾ ಅವಶ್ಯಕತೆ ಇದ್ದು, ಈಗ ಅಗತ್ಯ ಪ್ರಮಾಣದ ಅರ್ಧಕ್ಕಿಂತ ಕಡಿಮೆ ಗೊಬ್ಬರ ಮಾತ್ರ ಲಭ್ಯವಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ’ ಎಂದು ಎಚ್ಚರಿಸಿದರು.

‘ಆದ್ದರಿಂದ ಬಗರ್ಹುಕುಂ ರೈತರಿಗೂ ಗೊಬ್ಬರ ವಿತರಿಸಲು ಸರ್ಕಾರ ವಿಶೇಷ ಮಾನದಂಡ ರೂಪಿಸಬೇಕು. ಯೂರಿಯಾ ಮತ್ತು ಡಿಎಪಿ ಗೊಬ್ಬರ ಎಲ್ಲ ರೈತರಿಗೆ ಸಮರ್ಪಕವಾಗಿ ತಲುಪುವಂತೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಪರವಾನಗಿ ಭೂಮಾಪಕರು ನಡೆಸುತ್ತಿರುವ ಮುಷ್ಕರದಿಂದ ರೈತರಿಗೆ ತೊಂದರೆ ಉಂಟಾಗಿದೆ. ಸರ್ವೆ, ಹದ್ದುಬಸ್ತು, ಪೋಡಿ ಮುಕ್ತ ಅಭಿಯಾನ ಹಾಗೂ ನ್ಯಾಯಾಲಯ ಸಂಬಂಧಿತ ಕೆಲಸಗಳು ಸ್ಥಗಿತಗೊಂಡಿವೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಭೂಮಾಪಕರ ಸಮಸ್ಯೆ ಪರಿಹರಿಸಬೇಕು’ ಎಂದು ಮನವಿ ಮಾಡಿದರು.

ಇ.ಬಿ. ಜಗದೀಶ್, ಕೆ.ರಾಘವೇಂದ್ರ, ಹಿಟ್ಟೂರು ರಾಜು, ಸಿ.ಬಿ. ಹನುಮಂತಪ್ಪ, ಬಸವರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-42-928338629

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.