ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತೀರ್ಥಹಳ್ಳಿ | ಮದ್ಯ ಸೇವಿಸಿ ವಾಹನ ಚಾಲನೆ: ₹ 15,000 ದಂಡ

Published 29 ಜೂನ್ 2024, 16:17 IST
Last Updated 29 ಜೂನ್ 2024, 16:17 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಮದ್ಯ ಸೇವಿಸಿ ಕಾರು ಚಾಲನೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಟಪಾಡಿ ಪ್ರಸನ್ನ ಶೆಟ್ಟಿ (32) ಅವರಿಗೆ ₹ 15,000 ದಂಡ ವಿಧಿಸಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ.

ಪ್ರಸನ್ನ ಶೆಟ್ಟಿ ಅವರು ಗುರುವಾರ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದಿದ್ದನ್ನು ಪೊಲೀಸರು ಪತ್ತೆ ಮಾಡಿದ್ದರು.  ಈ ಸಂಬಂಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಕಾರ್ಯಚರಣೆಯಲ್ಲಿ ಪಿಎಸ್‌ಐ ರಂಗನಾಥ ಅಂತರಗಟ್ಟಿ, ಎಎಸ್‌ಐ ಉಮೇಶ್‌ ನಾಯ್ಕ್, ಸಿಬ್ಬಂದಿ ಸುನೀಲ್‌ ಕನ್ನಂಗಿ, ಅನಿಲ್‌ ಯಡೂರು, ಗಣೇಶ್‌ ಆಗುಂಬೆ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT