ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಗಲ್ | 'ವೈಯಕ್ತಿಕ ದ್ವೇಷ; ಮನೆಗೆ ಬೆಂಕಿ'

Published 13 ಮೇ 2024, 16:20 IST
Last Updated 13 ಮೇ 2024, 16:20 IST
ಅಕ್ಷರ ಗಾತ್ರ

ಕಾರ್ಗಲ್: ಹಣಕಾಸಿನ ವಿಷಯದಲ್ಲಿ ಉಂಟಾಗಿದ್ದ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಜೋಗದ ಟಿ.ಎಂ.ಶೆಡ್ ನಿವಾಸಿ ದೇವಿಕಾ ಅವರ ವಾಸದ ಮನೆಗೆ ಭಾನುವಾರ ಬೆಳಿಗ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಬೆಂಕಿ ಆಕಸ್ಮಿಕ ಪ್ರಕರಣದಲ್ಲಿ ದೇವಿಕಾ ಅವರ ವಾಸದ ಮನೆಯ ಚಾವಣಿ ಹಾಗೂ ಗೃಹೋಪಯೋಗಿ ವಸ್ತುಗಳು ಸೇರಿ ಅಂದಾಜು ₹ 6 ಲಕ್ಷ ಮೌಲ್ಯದ ವಸ್ತುಗಳು ನಾಶವಾಗಿವೆ ಎಂದು ಪೋಲೀಸರು ಅಂದಾಜಿಸಿದ್ದಾರೆ.

‘ದೇವಿಕಾ ಅವರು ಊರಿನಲ್ಲಿಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ಬೆಂಕಿ ಹಚ್ಚಿದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಳಗಿನಜಾವ ಮನೆಗೆ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ನೋಡಿದ ನೆರಮನೆಯ ನಿವಾಸಿಗಳು, ಅಗ್ನಿಶಾಮಕ ದಳಕ್ಕೆ ತಿಳಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗುವುದನ್ನು ತಪ್ಪಿಸಿದ್ದಾರೆ.  ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಸಬ್ಇನ್‌ಸ್ಪೆಕ್ಟರ್ ಹೊಳೆಬಸಪ್ಪ ಹೋಳಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT