ಸಾಗರ: ‘ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪರಿಭಾವಿತ ಅರಣ್ಯ ಪ್ರದೇಶದ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಅರಣ್ಯ ಇಲಾಖೆ ಮುಂದಾಗಿದೆ. ಈ ಸಂಬಂಧ ಗ್ರಾಮೀಣ ಭಾಗದ ಜನರಿಗೆ ಸೂಕ್ತ ಮಾಹಿತಿ ನೀಡಬೇಕು’ ಎಂದು ಮಲೆನಾಡು ರೈತ ಹೋರಾಟ ವೇದಿಕೆ ಅಧ್ಯಕ್ಷ ತೀ.ನ.ಶ್ರೀನಿವಾಸ್ ಒತ್ತಾಯಿಸಿದ್ದಾರೆ.

‘ರಾಜ್ಯದಲ್ಲಿ 9 ಲಕ್ಷ ಹೆಕ್ಟೇರ್ ಪ್ರದೇಶವನ್ನು ಪರಿಭಾವಿತ ಅರಣ್ಯ ಎಂದು ಈ ಮೊದಲು ಗುರುತಿಸಲಾಗಿತ್ತು. ನಂತರ ಅದರ ಸಂಖ್ಯೆ 3.30 ಲಕ್ಷ ಹೆಕ್ಟೇರ್ಗೆ ಇಳಿದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 36,968 ಹೆಕ್ಟೇರ್ ಪರಿಭಾವಿತ ಅರಣ್ಯ ಪ್ರದೇಶ ಇರುವುದಾಗಿ ಗುರುತಿಸಲಾಗಿದೆ. ಅರಣ್ಯದ ಸ್ವರೂಪ ಕಳೆದುಕೊಂಡಿರುವ ಪ್ರದೇಶದ ಬಗ್ಗೆ ಇಲಾಖೆ ಸಮೀಕ್ಷೆ ವೇಳೆ ನಿಖರ ಮಾಹಿತಿ ಸಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಸಮೀಕ್ಷೆಗೆ ಮುನ್ನ ಸ್ಥಳೀಯ ಜನರಿಗೆ ಮಾಹಿತಿ ನೀಡಬೇಕು. ಸ್ಥಳೀಯ ಸಂಸ್ಥೆ, ಗ್ರಾಮ ಸಭೆಗೂ ತಿಳಿಸಬೇಕು ಎಂಬ ರಾಜ್ಯ ಸರ್ಕಾರದ ಸುತ್ತೋಲೆಯನ್ನು ಅರಣ್ಯ ಇಲಾಖೆ ಕಟ್ಟುನಿಟ್ಟಾಗಿ ಪಾಲಿಸಬೇಕು. ಕೇಂದ್ರ ಸರ್ಕಾರ ಅರಣ್ಯ ಸಂರಕ್ಷಣಾ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಸಮೀಕ್ಷೆ ವೇಳೆ ಪರಿಗಣಿಸಿ ವರದಿ ಸಲ್ಲಿಸಬೇಕು’ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-42-80928208

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.