ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗದಲ್ಲಿ ಗ್ಯಾಂಗ್‌ವಾರ್‌: ಇಬ್ಬರ ಸಾವು

Published 9 ಮೇ 2024, 0:30 IST
Last Updated 9 ಮೇ 2024, 0:30 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ಲಷ್ಕರ್ ಮೊಹಲ್ಲಾದಲ್ಲಿ ರೌಡಿ ಶೀಟರ್‌ಗಳ ಮಧ್ಯೆ ನಡೆದ ಗಲಭೆಯಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಬುಧವಾರ ಸಂಜೆ ಸಂಭವಿಸಿದೆ.

ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ. ಸ್ಥಿತಿ ಗಂಭೀರವಾಗಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಸಂಜೆ 5ರ ಹೊತ್ತಿಗೆ ಲಷ್ಕರ್‌ ಮೊಹಲ್ಲಾಕ್ಕೆ ಬಂದ ಕೆಲವರು ಸ್ಥಳೀಯ ರೌಡಿಶೀಟರ್‌ ಯಾಸೀನ್‌ ಖುರೇಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ರಕ್ಷಣೆಗೆ ಬಂದ ಆತನ ಗ್ಯಾಂಗ್‌ನ ಸದಸ್ಯರು ಪ್ರತಿದಾಳಿ ನಡೆಸಿದ್ದಾರೆ.

ಈ ವೇಳೆ ದಾಳಿ ಮಾಡಲು ಬಂದವರ ತಂಡದಲ್ಲಿದ್ದ ಕೆ.ಆರ್‌. ಪುರಂ ನಿವಾಸಿ ಶೋಯಬ್‌ ಖಲಂದರ್‌ ಅಲಿಯಾಸ್‌ ಶೇಬು (32) ಹಾಗೂ ಅಣ್ಣಾನಗರ ನಿವಾಸಿ ಗೌಸ್‌ (30) ಮೇಲೆ ಖುರೇಶಿ ತಂಡದ ಸದಸ್ಯರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಗಾಯಗೊಂಡು ಕೆಳಗೆ ಬಿದ್ದ ಅವರ ತಲೆಯ
ಮೇಲೆ ಚಪ್ಪಡಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ.
ಇದರಿಂದ ಲಷ್ಕರ್ ಮೊಹಲ್ಲಾ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಘಟನೆಯಲ್ಲಿ ಯಾಸೀನ್ ಖುರೇಶಿ ಸಹ ತೀವ್ರ ಗಾಯಗೊಂಡಿದ್ದು, ಆತನ ಸ್ಥಿತಿ ಗಂಭೀರವಾಗಿದೆ.

ಎಸ್‌.ಪಿ ಪರಿಶೀಲನೆ: ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನಷ್ಟು ಮಾಹಿತಿ ಪಡೆಯಲು ಸಿಬ್ಬಂದಿಯು ಸುತ್ತಲಿನ ಪ್ರದೇಶದ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳ ಪರಿಶೀಲನೆ ನಡೆಸುತ್ತಿದ್ದಾರೆ. ನಂತರ ವಿವರ ನಿಡಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT