ಶಿವಮೊಗ್ಗ: ‘ಯುವಜನ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೇ ಹೊರತು ಚಟಗಳನ್ನಲ್ಲ. ತಾತ್ಕಾಲಿಕ ಸಂತೋಷಕ್ಕಿಂತ ಶಾಶ್ವತ ಸಂತೋಷ ತಮ್ಮದಾಗಿಸಿಕೊಳ್ಳಬೇಕು’ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಎ. ಮಂಜುನಾಥ ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತದ ಆಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ತಂಬಾಕು ಸೇವನೆ ವಿರೋಧಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

‘ಯುವಜನ ಪ್ರೌಢಾವಸ್ಥೆಯಲ್ಲಿ ಕೆಲವು ಆಕರ್ಷಣೆಗಳಿಗೆ ಒಳಗಾಗಿ ಅಥವಾ ಮತ್ಯಾವುದೋ ಒತ್ತಡಕ್ಕೆ ಮಣಿದು ದುಶ್ಚಟಗಳಿಗೆ ಬಲಿಯಾಗುವ ಸಾಧ್ಯತೆ ಇರುತ್ತದೆ. ಆದರೆ, ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಿ, ಉತ್ತಮ ಪುಸ್ತಕಗಳನ್ನು ಓದುವುದು, ಸಂಗೀತ ಕೇಳುವುದು ಈ ರೀತಿಯ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು’ ಎಂದರು.

‘ತಂಬಾಕು ಸೇವನೆ ಅತ್ಯಂತ ಮಾರಕವಾಗಿದ್ದು, ಕ್ಯಾನ್ಸರ್, ಹೃದಯ ಹಾಗೂ ಶ್ವಾಸ ಸಂಬಂಧಿ ಮಾರಣಾಂತಿಕ ಕಾಯಿಲೆಗಳು ಬರುತ್ತವೆ. ಧೂಮಸಹಿತ ತಂಬಾಕು ವಸ್ತುಗಳಲ್ಲಿ 7,000 ರಾಸಾಯನಿಕಗಳಿದ್ದು, ಇದರಲ್ಲಿ ಶೇ 69ರಷ್ಟು ಕ್ಯಾನ್ಸರ್ ಕಾರಕಗಳಾಗಿವೆ’ ಎಂದು ಡಿಎಚ್ಒ ಡಾ.ಕೆ.ಎಸ್.ನಟರಾಜ್ ಎಂದು ಹೇಳಿದರು.

‘ವಿಶ್ವದಾದ್ಯಂತ ಪ್ರತಿವರ್ಷ 60 ಲಕ್ಷಕ್ಕಿಂತ ಅಧಿಕ ಜನ ತಂಬಾಕು ಸೇವನೆಯಿಂದ ಮರಣ ಹೊಂದುತ್ತಿದ್ದಾರೆ. ಪ್ರತಿ 6 ಸೆಕೆಂಡ್ಗೆ ಒಂದು ಸಾವು ಸಂಭವಿಸುತ್ತಿದೆ. ಆದ್ದರಿಂದ ಎಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ’ ಎಂದರು. ‘ತಂಬಾಕು ಉತ್ಪನ್ನಗಳನ್ನು ವಯಸ್ಕರಲ್ಲದವರಿಗೆ ಮಾರಾಟ ಮಾಡುವುದು ಹಾಗೂ ಅವರಿಂದ ಮಾರಾಟ ಮಾಡಿಸುವುದು, ಶಿಕ್ಷಣ ಸಂಸ್ಥೆಗಳ 100 ಮೀಟರ್ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ‘ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ್ ತಳಿಸಿದರು.

ಎಎಸ್ಪಿ ಕಾರಿಯಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಲ್. ನಾಗರಾಜ ನಾಯ್ಕ್, ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಮೋಹನ್, ಟಿಎಚ್ಒ ಡಾ. ಚಂದ್ರಶೇಖರ್, ಡಾ.ರವೀಶ್, ಡಾ.ಸತೀಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-42-1667529681

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.