ಶಿವಮೊಗ್ಗ: ಇಲ್ಲಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕೆ ನಗರದ ಬಿ.ಎಚ್.ರಸ್ತೆಯ ಮೇನ್ ಮಿಡ್ಲ್ ಸ್ಕೂಲ್ ಆವರಣದಲ್ಲಿ ಶಿಥಿಲಗೊಂಡಿರುವ ತಮಿಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡದ ಜಾಗ ಹಸ್ತಾಂತರಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸುಪರ್ದಿಯಲ್ಲಿರುವ 27 ಗುಂಟೆ ಜಾಗವನ್ನು ಮಹಿಳಾ ಕಾಲೇಜು ಕಟ್ಟಡ ನಿರ್ಮಾಣಕ್ಕಾಗಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿ ಮೇ 22 ರಂದು ಆದೇಶ ಹೊರಡಿಸಲಾಗಿದೆ.

ಮೇನ್ ಮಿಡ್ಲ್ ಸ್ಕೂಲ್ ಆವರಣದಲ್ಲಿ ಮೇನ್ ಮಿಡ್ಲ್ ಸ್ಕೂಲ್, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಬಾಲಕಿಯರ ಪದವಿಪೂರ್ವ ಕಾಲೇಜು, ಸರ್ಕಾರಿ ಉರ್ದು ಶಾಲೆ, ತಮಿಳು ಪ್ರೌಢಶಾಲೆ ಕಾರ್ಯನಿರ್ವಹಿಸುತ್ತಿವೆ. ಇಲ್ಲಿರುವ 27 ಗುಂಟೆ ಜಾಗವನ್ನು ಮಹಿಳಾ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಬಿಟ್ಟುಕೊಡಬೇಕೆಂಬ ಪ್ರಸ್ತಾವ ಕಾಲೇಜು ಶಿಕ್ಷಣ ಇಲಾಖೆಯಿಂದ ಬಂದಿತ್ತು. ಸ್ಥಳೀಯ ಶಾಸಕರು ಈ ಬಗ್ಗೆ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಿದ್ದರು. ಇದರಂತೆ ಸಚಿವರು ಇತ್ತೀಚೆಗೆ ಸ್ಥಳ ಪರಿಶೀಲಿಸಿ ಕಾಲೇಜು ಶಿಕ್ಷಣ ಇಲಾಖೆಗೆ ಜಾಗ ಹಸ್ತಾಂತರಿಸುವಂತೆ ಶಿಫಾರಸು ಮಾಡಿದ್ದರು.

ಕೆಡಿಪಿ ಸಭೆಯಲ್ಲಿ ಪ್ರಸ್ತಾಪ: ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ವಿಷಯ ಪ್ರಸ್ತಾಪಿಸಿ ನಮ್ಮ ಮನವಿ ಮೇರೆಗೆ ನೀವು ಸ್ಥಳ ಪರಿಶೀಲನೆ ಮಾಡಿ ಇಲಾಖೆಗೆ ಪತ್ರ ಬರೆದಿದ್ದೀರಿ. ಆದರೆ ಈವರೆಗೆ ಆದೇಶವಾಗಿಲ್ಲ ಎಂದಿದ್ದರು. ಸಭೆಯಲ್ಲಿಯೇ ತಮ್ಮ ಇಲಾಖೆಯ ಆಯುಕ್ತರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕೂಡಲೇ ಆದೇಶ ಮಾಡುವಂತೆ ಸೂಚಿಸಿದ್ದರು.

ಈ ಬಗ್ಗೆ ಪತ್ರ ವ್ಯವಹಾರ ಮೊದಲೇ ಆಗಿದ್ದರಿಂದ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಿಂದ ಶುಕ್ರವಾರವೇ ಆದೇಶ ಹೊರಬಿದ್ದಿದೆ. ಇದರಿಂದ ನಗರದಲ್ಲಿ ನಡೆಯುತ್ತಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ಶಾಶ್ವತ ಜಾಗ ಸಿಕ್ಕಂತಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-42-1794881479

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.