ಶಿವಮೊಗ್ಗ: ಹೊಳೆಹೊನ್ನೂರು, ಆನವೇರಿ ಹಾಗೂ ಕಲ್ಲಿಹಾಳ ಹೋಬಳಿಗಳಲ್ಲಿ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಯಿಂದಾಗಿ ಆಸ್ತಿಪಾಸ್ತಿಗೆ ವಿಪರೀತ ಹಾನಿಯಾಗಿದೆ. ಈ ಘಟನೆಯನ್ನು ‘ವಿಶೇಷ ಪ್ರಕರಣ’ ಎಂದು ಪರಿಗಣಿಸಿ ತಕ್ಷಣವೇ ಹೆಚ್ಚಿನ ಪರಿಹಾರ ನೀಡುವಂತೆ ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್.ಆರ್. ಬಸವರಾಜಪ್ಪ ಒತ್ತಾಯಿಸಿದರು.

ರೈತ ಸಂಘದಿಂದ ಜಿಲ್ಲಾಡಳಿತಕ್ಕೆ ಬುಧವಾರ ಮನವಿ ಸಲ್ಲಿಸಿದ ಅವರು, ‘ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಅಡಿಕೆ ಮರಗಳು ನೆಲಕಚ್ಚಿವೆ. ಸರಾಸರಿ ಒಂದು ಎಕರೆಯಲ್ಲಿರುವ ಶೇ 50ಕ್ಕಿಂತ ಹೆಚ್ಚು ಮರಗಳು ಧರೆಗುರುಳಿವೆ. ಇದರೊಂದಿಗೆ ತೆಂಗಿನ ಮರಗಳಿಗೂ ಅಪಾರ ಹಾನಿಯಾಗಿದೆ. ಬಿರುಗಾಳಿಯ ಆರ್ಭಟಕ್ಕೆ ಅನೇಕ ಮನೆಗಳು ವಾಸಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿವೆ’ ಎಂದರು.

ತೊಂದರೆಗೀಡಾದ ಎಲ್ಲಾ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹ 50,000 ಪರಿಹಾರ ಘೋಷಿಸಬೇಕು. ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣಕ್ಕೆ ₹ 5 ಲಕ್ಷ ಧನಸಹಾಯ ನೀಡಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಮಾಡಿ, ಬಡ್ಡಿ ರಹಿತವಾಗಿ ಹೊಸ ಸಾಲ ಸೌಲಭ್ಯ ಒದಗಿಸಬೇಕು. ಯಾವುದೇ ತಾಂತ್ರಿಕ ತೊಂದರೆ ನೀಡದೆ ತಕ್ಷಣವೇ ಬೆಳೆ ವಿಮೆ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಪ್ರತಿ ಹಳ್ಳಿಗೂ ಭೇಟಿ ನೀಡಿ ನೈಜ ಸಮೀಕ್ಷೆ ನಡೆಸುವ ಮೂಲಕ ರೈತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.

ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಟಿ.ಎಂ ಚಂದ್ರಪ್ಪ, ಸಂಚಾಲಕಿ ಭಾಗ್ಯಾ ರಾಘವೇಂದ್ರ, ಕೆ. ರಾಘವೇಂದ್ರ, ಉಪಾಧ್ಯಕ್ಷ ಪಿ. ಶೇಖರಪ್ಪ, ಮಹದೇವಪ್ಪ, ಕಾರ್ಯದರ್ಶಿ ಗುರುಶಾಂತ, ಭದ್ರಾವತಿ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎನ್ ಪಂಚಾಕ್ಷರಿ,ಪ್ರಧಾನ ಕಾರ್ಯದರ್ಶಿ ಸಿ.ಬಿ ಹನುಮಂತಪ್ಪ ನೇತೃತ್ವ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-42-1960803146

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.