ಸಾಗರ: ‘ಹೈಕೋರ್ಟ್ಗಳ ಆರಂಭಕ್ಕೆ ಸಂಬಂಧಿಸಿದಂತೆ 1981ರಲ್ಲಿ ಜಸ್ವಂತ್ ಸಿಂಗ್ ಆಯೋಗ ನೀಡಿರುವ ಶಿಫಾರಸ್ಸಿನಂತೆ ಮಧ್ಯ ಕರ್ನಾಟಕ ಭಾಗದ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವುದು ಸೂಕ್ತ’ ಎಂದು ಶಿವಮೊಗ್ಗದ ಹಿರಿಯ ವಕೀಲ ಅಶೋಕ್ ಜಿ. ಭಟ್ ಪ್ರತಿಪಾದಿಸಿದರು.

‘ಜಿಲ್ಲೆಯನ್ನು ಒಳಗೊಂಡಂತೆ ಮಂಗಳೂರಿನಲ್ಲಿ ಸಂಚಾರಿ ಪೀಠ ಸ್ಥಾಪನೆಯಾದರೆ ಭೌಗೋಳಿಕ ಅಂಶ ಸೇರಿದಂತೆ ಹಲವು ವಿಚಾರಗಳಲ್ಲಿ ಜನರಿಗೆ ತೊಂದರೆಯಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಹೈಕೋರ್ಟ್ ಶಿವಮೊಗ್ಗಕ್ಕೆ ಮೊದಲ ಆದ್ಯತೆ ನೀಡಬೇಕು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಂತೆ ಪೀಠ ಸ್ಥಾಪಿಸುವುದು ಸೂಕ್ತವಾಗಿದೆ. ಈ ಜಿಲ್ಲೆಗಳ ಜನಸಂಖ್ಯೆ, ಇಲ್ಲಿನ ನ್ಯಾಯಾಲಯಗಳಲ್ಲಿರುವ ಪ್ರಕರಣ, ವಕೀಲರ ಸಂಖ್ಯೆ, ಮೂಲ ಸೌಕರ್ಯಗಳ ಲಭ್ಯತೆ, ಕಕ್ಷಿದಾರರಿಗೆ ಆಗುವ ಅನುಕೂಲತೆ ಈ ಎಲ್ಲಾ ಅಂಶಗಳನ್ನು ಪರಿಗಣಿಸಿದರೆ ಸಂಚಾರಿ ಪೀಠಕ್ಕೆ ಶಿವಮೊಗ್ಗವೇ ಸೂಕ್ತ’ ಎಂದು ಅಭಿಪ್ರಾಯಪಟ್ಟರು.

ವಕೀಲರ ಸಂಘದ ಕಾರ್ಯದರ್ಶಿ ಶೇಖರಪ್ಪ, ಪ್ರಮುಖರಾದ ಎಂ.ಹರನಾಥ್ ರಾವ್, ವಿನಯಕುಮಾರ್, ಕೆ.ವಿ.ಪ್ರವೀಣ್, ಕೆ.ವಿ.ಜಯರಾಮ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-42-637212975

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.