ಶಿವಮೊಗ್ಗ: ‘ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಆಗಬೇಕು’ ಎಂದು ಗೋಪಾಳ ಬಡಾವಣೆಯ ಚಂದನವನ ಆರೋಗ್ಯ ಪಾರ್ಕ್ನ ಪದಾಧಿಕಾರಿಗಳು ಮತ್ತು ವಾಯುವಿಹಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಚಂದನವನ ಪಾರ್ಕ್ನಿಂದ ಗೋಪಾಳದ ಅಂಚೆ ಕಚೇರಿಯವರೆಗೂ ಶನಿವಾರ ಮೆರವಣಿಗೆಯಲ್ಲಿ ಬಂದು ಮುಖ್ಯಮಂತ್ರಿಗೆ ಬರೆದ ಪತ್ರವನ್ನು ಅಂಚೆ ಡಬ್ಬಿಗೆ ಹಾಕಿದರು.

‘ಶಿವಮೊಗ್ಗ ಮಧ್ಯ ಕರ್ನಾಟಕದ ಪ್ರಮುಖ ಸ್ಥಳವಾಗಿದ್ದು, ಸುತ್ತಮುತ್ತಲಿನ ಜಿಲ್ಲೆಗಳಿಗೆ ಕೇಂದ್ರ ಸ್ಥಾನವಾಗಿದೆ. ಈಗಾಗಲೇ ಇಲ್ಲಿ ವಿವಿಧ ಬಗೆಯ 18 ನ್ಯಾಯಾಲಯ ಕಾರ್ಯನಿರ್ವಹಿಸುತ್ತಿವೆ. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುತ್ತದೆ ಎಂಬ ಮಾಹಿತಿ ಇದ್ದು, ಆ ಪೀಠಕ್ಕೆ ಶಿವಮೊಗ್ಗವನ್ನೂ ಸೇರಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅದು ಸರಿಯಲ್ಲ. ಮಂಗಳೂರು ಪೀಠಕ್ಕೆ ಶಿವಮೊಗ್ಗ ಸೇರ್ಪಡೆಯಾದರೆ ಈ ಭಾಗದ ಜನರಿಗೆ ತೊಂದರೆಯಾಗಲಿದೆ. ಮಧ್ಯ ಕರ್ನಾಟಕದಿಂದ ಮಂಗಳೂರಿಗೆ ಸರಿಯಾದ ರಸ್ತೆ ಸಂಪರ್ಕವಾಗಲಿ, ಸಂಚಾರ ಸೌಲಭ್ಯವಾಗಲಿ ಇಲ್ಲ. ಹೀಗಾಗಿ ಇಲ್ಲಿನ ಕಕ್ಷಿದಾರರಿಗೆ, ಸಾರ್ವಜನಿಕರಿಗೆ ಮಂಗಳೂರಿಗೆ ಹೋಗಿ ಬರಲು ತೊಂದರೆಯಾಗಲಿದೆ. ಆದ್ದರಿಂದ ಹೈಕೋರ್ಟ್ ಪೀಠವನ್ನು ಶಿವಮೊಗ್ಗದಲ್ಲಿಯೇ ಸ್ಥಾಪಿಸುವುದು ಒಳಿತು’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

‘ಶಿವಮೊಗ್ಗ ನ್ಯಾಯಾಲಯದಲ್ಲಿನ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಹಾಲಿ ಬೆಂಗಳೂರು ಹೈಕೋರ್ಟ್ನಲ್ಲಿ ಶಿವಮೊಗ್ಗದ ವಕೀಲರ ಸಂಖ್ಯೆಯೂ ಹೆಚ್ಚಿದೆ. ಎಲ್ಲಾ ಪ್ರಕರಣಗಳನ್ನೂ ಹೆಚ್ಚಾಗಿ ಅವರೇ ನೋಡಿಕೊಳ್ಳುತ್ತಿದ್ದು, ಮಂಗಳೂರಿನ ಪೀಠಕ್ಕೆ ಶಿವಮೊಗ್ಗವನ್ನು ಸೇರಿಸಿದರೆ ಇಲ್ಲಿಯ ವಕೀಲರೇ ಮಂಗಳೂರಿಗೆ ತೆರಳಿ ಪ್ರಕರಣ ನಡೆಸುವುದು ದುಸ್ತರವಾಗುತ್ತದೆ’ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

‘ಮಂಗಳೂರಿನಲ್ಲಿ ಸ್ಥಾಪನೆಯಾಗುವ ಹೈಕೋರ್ಟ್ ಪೀಠಕ್ಕೆ ಶಿವಮೊಗ್ಗ ಜಿಲ್ಲೆಯನ್ನು ಸೇರಿಸುವುದಕ್ಕೆ ನಮ್ಮ ವಿರೋಧವಿದೆ. ಹೈಕೋರ್ಟ್ ಪೀಠವನ್ನು ಶಿವಮೊಗ್ಗದಲ್ಲೇ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮತ್ತು ಹೈಕೋರ್ಟ್ ಕ್ರಮ ವಹಿಸಬೇಕು’ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಪತ್ರಕ್ಕೆ ಸುಮಾರು 50ಕ್ಕೂ ಹೆಚ್ಚು ಜನರು ಸಹಿ ಹಾಕಿದ್ದಾರೆ.

ಪಾರ್ಕ್ನ ಗೌರವಾಧ್ಯಕ್ಷ ಕಲಗೋಡು ರತ್ನಾಕರ್, ಕಾರ್ಯದರ್ಶಿ ಎಲ್.ಗುರುರಾಜ್, ಕ್ರೀಡಾ ಕಾರ್ಯದರ್ಶಿ ಜಿ.ಎಸ್. ಶಿವಕುಮಾರ್, ಪ್ರಮುಖರಾದ ರುದ್ರೇಶ್, ಆಶೋಕ್, ಮಣಿ, ಪ್ರಭಾಕರ್, ಶಾಂತಕ್ಕ, ರಂಗೇಗೌಡ, ಶ್ರೀಧರ್, ಸುಧಾಕರ್, ಮಂಜುನಾಥ್, ನೂರ್ ಜಹಾನ್, ಶಾಂತಯ್ಯ, ರಾಘು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-42-541139291

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.