ಶಿವಮೊಗ್ಗ: ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘ ಸೋಮವಾರದಿಂದ ವಕೀಲರ ಭವನದ ಮುಂಭಾಗ ಅನಿರ್ದಿಷ್ಟಾವಧಿ ಹೋರಾಟ ಪ್ರಾರಂಭಿಸಿದೆ. ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ, ಛೇಂಬರ್ ಆಫ್ ಕಾಮರ್ಸ್ ಸೇರಿದಂತೆ ಬೇರೆ ಬೇರೆ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿವೆ.

‘ಮಧ್ಯ ಕರ್ನಾಟಕಕ್ಕೆ ಹೈಕೋರ್ಟ್ ಪೀಠ ಬೇಕೇ ಬೇಕು. ಶಿವಮೊಗ್ಗವನ್ನು ಕೇಂದ್ರವಾಗಿರಿಸಿ ಇಲ್ಲೇ ಪೀಠ ಸ್ಥಾಪಿಸುವಂತೆ ಒತ್ತಾಯಿಸುತ್ತಿದ್ದೇವೆ. ಯಾವುದೇ ಕಾರಣಕ್ಕೂ ಮಂಗಳೂರಿನಲ್ಲಿ ಹೈಕೋರ್ಟ್ ಪೀಠವಾದರೆ ಶಿವಮೊಗ್ಗದ ಪ್ರಕರಣಗಳನ್ನು ಅಲ್ಲಿಗೆ ವರ್ಗಾಯಿಸಬಾರದು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ, ಹೈಕೋರ್ಟ್ ಸ್ಥಾಪನೆ ಹೋರಾಟ ಸಮಿತಿಯ ಅಧ್ಯಕ್ಷರಾದ ಬಸಪ್ಪಗೌಡ, ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಸಂಚಾಲಕರಾದ ಕೆ.ವಿ.ವಸಂತ್ಕುಮಾರ್, ಸತೀಶ್ಕುಮಾರ್ ಶೆಟ್ಟಿ, ಅಶೋಕ್ ಕುಮಾರ್, ಗಾಂಧಿಬಸಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-42-951512982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.