ಶಿವಮೊಗ್ಗ: ಮಧ್ಯ ಕರ್ನಾಟಕ ಭಾಗಕ್ಕೆ ಹೈಕೋರ್ಟ್ ಸಂಚಾರಿ ಪೀಠ ಮಂಜೂರು ಮಾಡಿ ಅದನ್ನು ಶಿವಮೊಗ್ಗದಲ್ಲಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ. ಶನಿವಾರ ಇಲ್ಲಿ ನಡೆದ ಬೃಹತ್ ಜಾಥಾ ಜನಸಮೂಹದ ಪಾಲ್ಗೊಳ್ಳುವಿಕೆಯ ಭಾಗವಾಗಿ ಗಮನ ಸೆಳೆಯಿತು.

ವಕೀಲರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನ್ಯಾಯಾಲಯದ ಆವರಣದಿಂದ ಹೊರಟ ಜಾಥಾದಲ್ಲಿ ಸೇರ್ಪಡೆಗೊಂಡ ನಗರದ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬಲ ನೀಡಿದವು. ಏರು ಬಿಸಿಲನ್ನು ಲೆಕ್ಕಿಸದೇ ಹೆಜ್ಜೆ ಹಾಕಿದ ಸಾವಿರಾರು ಜನ ಹೈಕೋರ್ಟ್ ಪೀಠದ ಬೇಡಿಕೆಯ ದನಿಯನ್ನು ಇನ್ನಷ್ಟು ಗಟ್ಟಿಗೊಳಿಸಿದರು.

ಬೃಹತ್ ಜಾಥಾದಲ್ಲಿ ವಕೀಲರ ಸಂಘದ ಜಿಲ್ಲಾ ಘಟಕದ ಜೊತೆ ಭದ್ರಾವತಿಯ ವಕೀಲರ ಸಂಘ, ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಘ, ನಾಗರಿಕ ಹಿತರಕ್ಷಣಾ ವೇದಿಕೆ, ರಾಷ್ಟ್ರಭಕ್ತರ ಬಳಗ, ಸಿಐಟಿಯು ಕಾರ್ಯಕರ್ತರು, ಎಸ್ಡಿಪಿಐ ಮುಖಂಡರು, ಜಯ ಕರ್ನಾಟಕ ಜನಪರ ವೇದಿಕೆ, ಜಿಲ್ಲಾ ಮಲೆನಾಡು ಮುದ್ರಕರ ಸಂಘ, ಛಾಯಾಗ್ರಾಹಕರ ಸಂಘ, ಜವಳಿ ವರ್ತಕರ, ಬೀದಿಬದಿ ವ್ಯಾಪಾರಸ್ಥರ ಸಂಘ, ಜೈನ್ ವರ್ತಕರ ಸಂಘ, ಜೆಸಿಐ ಮತ್ತು ರೋಟರಿ ಸಂಘಟನೆಗಳು, ದೀವರ ಕ್ಷೇಮಾಭಿವೃದ್ಧಿ ಸಂಘ, ಒಕ್ಕಲಿಗರ ಸಂಘದ ಜಿಲ್ಲಾ ಘಟಕ, ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾ, ಸ್ಮಾರ್ಥ ಬ್ರಾಹ್ಮಣರ ಸಂಘ, ದಲಿತ ಸಂಘರ್ಷ ಸಮಿತಿ, ಆದಿ ಜಾಂಬವ ಸಂಘ, ಹಿಂದುಳಿದ ವರ್ಗಗಳ ವೇದಿಕೆ, ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಟ್ರಸ್ಟ್, ಪೀಸ್ ಆರ್ಗನೈಜೇಷನ್, ಮಲ್ನಾಡ್ ಕೌಂಟಿ ನಿವಾಸಿಗಳ ಸಂಘ ಸೇರಿದಂತೆ 35ಕ್ಕೂ ಹೆಚ್ಚು ಸಂಘಟನೆಗಳ ಸದಸ್ಯರು ಹೆಜ್ಜೆ ಹಾಕಿದರು.

ಪ್ರತಿಭಟನಾ ಜಾಥಾ ನಗರದ ಮಹಾವೀರ ವೃತ್ತ, ಸರ್ ಎಂ.ವಿಶ್ವೇಶ್ವರಯ್ಯ ರಸ್ತೆ, ಬಿ.ಎಚ್.ರಸ್ತೆಯ ಮೂಲಕ ಶಿವಪ್ಪನಾಯಕ ವೃತ್ತ, ನೆಹರೂ ರಸ್ತೆ, ಸೀನಪ್ಪಶೆಟ್ಟಿ ವೃತ್ತ (ಗೋಪಿಸರ್ಕಲ್), ಬಾಲರಾಜ್ ಅರಸ್ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಅಲ್ಲಿ ಸಾರ್ವಜನಿಕ ಸಭೆಯಾಗಿ ಮಾರ್ಪಟ್ಟಿತ್ತು.

ಸಭೆಯಲ್ಲಿ ಮಾತನಾಡಿದ ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ, ರಾಷ್ಟ್ರಭಕ್ತ ಬಳಗದ ಕೆ.ಎಸ್.ಈಶ್ವರಪ್ಪ, ಕೆ.ಈ.ಕಾಂತೇಶ್, ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ, ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಕೆ.ವಿ.ವಸಂತ್ಕುಮಾರ್, ಸತೀಶ್ಕುಮಾರ್ ಶೆಟ್ಟಿ ಅವರು ಹೈಕೋರ್ಟ್ ಪೀಠದ ಬೇಡಿಕೆಗೆ ದನಿಯಾದರು.

‘ಮಂಗಳೂರಿಗೆ ಸಂಚಾರಿ ನ್ಯಾಯಪೀಠ ಮಂಜೂರಾಗಿದ್ದು ಮಧ್ಯ ಕರ್ನಾಟಕದ ದುರಾದೃಷ್ಟ. ಮಂಗಳೂರು ಮತ್ತು ಶಿವಮೊಗ್ಗ ನಡುವೆ ಹೋಲಿಕೆ ಮಾಡಿದರೆ ಶಿವಮೊಗ್ಗವೇ ಹೈಕೋರ್ಟ್ ಪೀಠ ಸ್ಥಾಪನೆಗೆ ಸೂಕ್ತ ಸ್ಥಳವಾಗಿದೆ. ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ ಮಂಜೂರು ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ನಿರಂತರವಾಗಿ ಹೋರಾಟ ಹಮ್ಮಿಕೊಳ್ಳೋಣ. ಇದಕ್ಕೆ ಜಾತಿ, ಪಕ್ಷ ಬೇಧ ಮರೆತು ಎಲ್ಲರೂ ಕೈಜೋಡಿಸೋಣ’ ಎಂಬ ಒಕ್ಕೊರಲ ದನಿ ಸಭೆಯಲ್ಲಿ ಕೇಳಿಬಂದಿತು.ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರಿಗೆ ಕಳೆದ 13 ದಿನಗಳಿಂದ ನಡೆಯುತ್ತಿರುವ ಹೋರಾಟ ಹಾಗೂ ಅದರ ಅಗತ್ಯವನ್ನು ಮನದಟ್ಟು ಮಾಡಿಕೊಟ್ಟು ಮನವಿ ಸಲ್ಲಿಸಲಾಯಿತು. ಉದ್ದೇಶಿತ ಹೈಕೋರ್ಟ್ ಸಂಚಾರಿ ಪೀಠಕ್ಕೆ ಜಾಗ ಗುರುತಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಅವರನ್ನು ಕೋರಲಾಯಿತು. ಜಾಥಾಗೆ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಕೆ.ಬಿ.ಪ್ರಸನ್ನಕುಮಾರ್, ಮುಖಂಡರಾದ ಎಚ್.ಸಿ.ಯೋಗೀಶ್, ಬಿ.ಎ.ರಮೇಶ ಹೆಗ್ಡೆ, ಎಂ.ಗುರುಮೂರ್ತಿ, ನಾಗರಾಜ ಕಂಕಾರಿ, ಕಲೀಂ ಪಾಷಾ, ರಮೇಶ ಶಂಕರಘಟ್ಟ, ಶಿವಕುಮಾರ್, ಪಾಲಾಕ್ಷಿ, ಖಾಸಗಿ ಬಸ್ ಮಾಲೀಕರ ಸಂಘದ ಮಾಜಿ ಅಧ್ಯಕ್ಷ ರಂಗಣ್ಣ ಬೆಂಬಲ ಸೂಚಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-43-413620652

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.