ತರೀಕೆರೆ: ಕರಾವಳಿ ಮತ್ತು ಮಧ್ಯ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾದ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿಗೆ ಬದಲಾಗಿ ಶಿವಮೊಗ್ಗದಲ್ಲಿಯೇ ಸ್ಥಾಪಿಸಬೇಕು ಎಂದು ತರೀಕೆರೆ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಸ್. ಸುರೇಶ್ಚಂದ್ರ ಹೇಳಿದರು.

ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕರಾವಳಿಯ ಭಾಗದ ಜನರಿಗೆ ಅನುಕೂಲವಾಗುವಂತೆ ಆ ಭಾಗದ ವಕೀಲರು ಮತ್ತು ಜನಪ್ರತಿನಿಧಿಗಳು ಮಂಗಳೂರಿನಲ್ಲಿ ಪೀಠ ಸ್ಥಾಪಿಸಲು ಒತ್ತಾಯಿಸುತ್ತಿದ್ದು, ಇದು ಇತರ ಜಿಲ್ಲೆಗಳ ಜನರಿಗೆ ಅನಾನುಕೂಲವಾಗಲಿದೆ ಎಂದರು.

ಬೆಂಗಳೂರಿನಿಂದ ಸುಮಾರು 250 ಕಿ.ಮೀ. ದೂರದಲ್ಲಿರುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಲಕ್ಷಾಂತರ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನ್ಯಾಯಾಲಯದ ಸೌಲಭ್ಯ ಒದಗಿಸಲು ಶಿವಮೊಗ್ಗದಲ್ಲಿ ಸಂಚಾರಿ ಪೀಠದ ಸ್ಥಾಪನೆ ಅಗತ್ಯವಾಗಿದೆ ಎಂದು ಹೇಳಿದರು.

ನ್ಯಾಯಮೂರ್ತಿ ಜಸ್ವಂತ್ ಸಿಂಗ್ ಸಮಿತಿಯ ಮಾರ್ಗ ಸೂಚಿಗಳ ಅನ್ವಯ ಸಂಚಾರ ಪೀಠದ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಅರ್ಹತೆಗಳನ್ನು ಶಿವಮೊಗ್ಗವು ಹೊಂದಿದೆ. ಶಿವಮೊಗ್ಗ, ಚಿಕ್ಕ ಮಗ ಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲೇ ಸಮರ್ಥ ವಕೀಲರಿದ್ದಾರೆ. ಈ ಎಲ್ಲ ಜಿಲ್ಲೆಗಳ ಚುನಾಯಿತ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕ ಸಂಘ-ಸಂಸ್ಥೆಗಳ ಒಮ್ಮತದ ಬೆಂಬಲ ಬೇಡಿಕೆ ಇದಾಗಿದೆ ಎಂದು ತಿಳಿಸಿದರು.

ಒಂದು ವೇಳೆ ಮಂಗಳೂರಿನಲ್ಲಿ ಪೀಠ ಸ್ಥಾಪಿಸಿದರೆ ಈ ಭಾಗದ ಜಿಲ್ಲೆಗಳ ಜನರಿಗೆ ಸಂಚಾರಕ್ಕೆ ಯೋಗ್ಯವಾದ ರಸ್ತೆ ಸಂಪರ್ಕಗಳಿಲ್ಲ. ಜತೆಗೆ ಬೆಂಗಳೂರು ಪೀಠವೇ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-126-908076377

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.