ಶಿವಮೊಗ್ಗ: ‘ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸ ಬೇಕು ಎಂದು ಆಗ್ರಹಿಸಿ ಜಿಲ್ಲಾ ವಕೀಲರ ಸಂಘವು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಮೇ 30ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ನ್ಯಾಯಾಲಯ ಆವರಣದಿಂದ ನಗರದ ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಂಡಿದೆ’ ಎಂದು ಹೈಕೋರ್ಟ್ ಸಂಚಾರಿ ಪೀಠ ಹೋರಾಟ ಸಮಿತಿಯ ಗೌರವಾಧ್ಯಕ್ಷ ಕೆ.ಬಸಪ್ಪಗೌಡ ತಿಳಿಸಿದರು.

‘11 ದಿನಗಳಿಂದ ಜಿಲ್ಲಾ ವಕೀಲರ ಸಂಘ ಧರಣಿ ನಡೆಸುತ್ತಿದ್ದು, ವಿವಿಧ ಸಂಘಟನೆಗಳು ಹಾಗೂ ಮಠಾಧೀಶರು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಹೋರಾಟವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸುವ ಉದ್ದೇಶದಿಂದ ಬೃಹತ್ ಜಾಥಾವನ್ನು ಆಯೋಜಿಸಲಾಗಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಚಿಕ್ಕಮಗಳೂರು, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಸಂಪರ್ಕ ಸೌಲಭ್ಯ ಹೊಂದಿರುವ ಮಧ್ಯ ಕರ್ನಾಟಕದ ಶಿವಮೊಗ್ಗದಲ್ಲಿ ಪ್ರಕರಣಗಳ ಸಂಖ್ಯೆ, ವಕೀಲರ ಸಂಖ್ಯೆ ಹಾಗೂ ಕಕ್ಷಿದಾರರ ಸಂಖ್ಯೆ ಹೆಚ್ಚಿರುವ ಕಾರಣ ಮಂಗಳೂರಿಗಿಂತ ಶಿವಮೊಗ್ಗವೇ ಸಂಚಾರ ಪೀಠಕ್ಕೆ ಸೂಕ್ತ ಸ್ಥಳವಾಗಿದೆ’ ಎಂದು ಅಭಿಪ್ರಾಯಪಟ್ಟರು.

‘ನ್ಯಾಯಮೂರ್ತಿ ಜಸ್ವಂತ್ ಸಿಂಗ್ ವರದಿಯಲ್ಲಿ ಸಂಚಾರಿ ಪೀಠ ಸ್ಥಾಪನೆಗೆ ನಾಲ್ಕು– ಐದು ಜಿಲ್ಲೆಗಳ ವ್ಯಾಪ್ತಿ ಹಾಗೂ ನ್ಯಾಯಮೂರ್ತಿಗಳಿಗೆ ವಿಚಾರಣೆಗೆ ಅಗತ್ಯ ಇರುವಷ್ಟು ಪ್ರಕರಣಗಳಿರಬೇಕು ಎಂಬ ಮಾನದಂಡಗಳನ್ನು ಉಲ್ಲೇಖಿಸಲಾಗಿದೆ. ಆ ಮಾನದಂಡಗಳಿಗೆ ಅನುಗುಣವಾಗಿ ಶಿವಮೊಗ್ಗವೇ ಸೂಕ್ತ ಪ್ರದೇಶ’ ಎಂದು ಹೇಳಿದರು.

‘ಮಂಗಳೂರಿನಲ್ಲಿ ಸಂಚಾರಿ ಪೀಠ ಸ್ಥಾಪನೆ ಪ್ರಸ್ತಾಪದ ವೇಳೆ ಶಿವಮೊಗ್ಗದ ಅಭಿಪ್ರಾಯವನ್ನು ಕೇಳಿಲ್ಲ. ರಾಜಕೀಯ ಪ್ರಭಾವದಿಂದ ಶಿವಮೊಗ್ಗವನ್ನು ಮಂಗಳೂರು ಪೀಠಕ್ಕೆ ಸೇರಿಸಲಾಗಿದೆ. ಒಂದು ವೇಳೆ ಶಿವಮೊಗ್ಗವನ್ನು ಕೈಬಿಟ್ಟರೆ ಕೇವಲ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗಷ್ಟೇ ಪೀಠ ಸ್ಥಾಪನೆ ಆದಂತಾಗುತ್ತದೆ. ಹೀಗಾದರೆ ರಾಜ್ಯದಲ್ಲಿ ಅನೇಕ ಕಡೆ ಸಂಚಾರಿ ಪೀಠ ಸ್ಥಾಪನೆಗೆ ಬೇಡಿಕೆಗಳು ಉದ್ಭವಿಸುತ್ತವೆ’ ಎಂದು ಹೇಳಿದರು.

ಬಿ.ಗೋಪಿನಾಥ್, ಕೆ.ವಿ.ವಸಂತ ಕುಮಾರ್, ಹಾಲಸ್ವಾಮಿ, ಕೆ.ಪಿ.ಶ್ರೀಪಾಲ್, ಎಂ.ಗುರುಮೂರ್ತಿ, ಶಿವ ಬಸಪ್ಪ, ಸ್ವಾತಿ, ಲಕ್ಷ್ಮೀಕಾಂತ ಚಿಮನೂರು, ರಾಜಪ್ಪ, ಶಿವಮೂರ್ತಿ, ಪ್ರದೀಪ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-44-1704970571

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.