ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ–ಸಿಂಹಧಾಮದಲ್ಲಿ ಸಂಭವಿಸಿದ ಪಶುವೈದ್ಯೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖಾ ವರದಿಯನ್ನು ಅರಣ್ಯ ಸಚಿವರಿಗೆ ಸಲ್ಲಿಸಲಾಗಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಶಿವಮೊಗ್ಗ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ. ಹನುಮಂತಪ್ಪ ತಿಳಿಸಿದರು.

ನೀರಾನೆ ದಾಳಿ ದುರಂತದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಮೃತಪಟ್ಟಿರುವುದು ದುಃಖಕರ ಘಟನೆ ಎಂದು ಶನಿವಾರ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಘಟನೆ ಕುರಿತು ಸಂಪೂರ್ಣ ಪರಿಶೀಲನೆ ನಡೆಸಿ, ಎಲ್ಲಾ ಅಂಶಗಳನ್ನು ಒಳಗೊಂಡ ಸಮಗ್ರ ವರದಿ ಸಿದ್ಧಪಡಿಸಿ ಅರಣ್ಯ ಸಚಿವರಿಗೆ ಸಲ್ಲಿಸಲಾಗಿದೆ. ವರದಿಯಲ್ಲಿ ಘಟನೆ ಸಂಭವಿಸಿದ ಸಂದರ್ಭ, ಭದ್ರತಾ ವ್ಯವಸ್ಥೆ ಹಾಗೂ ಸಿಬ್ಬಂದಿ ಕಾರ್ಯವಿಧಾನದ ಬಗ್ಗೆ ವಿವರವಾಗಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮೃಗಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಹೆಚ್ಚುವರಿ ಭದ್ರತಾ ಮಾರ್ಗಸೂಚಿಗಳು, ತರಬೇತಿ ಹಾಗೂ ತಂತ್ರಜ್ಞಾನ ಬಳಕೆಯನ್ನು ಬಲಪಡಿಸಲಾಗುವುದು. ಪ್ರಾಣಿಗಳ ನಿರ್ವಹಣೆಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಸಚಿವರು ವರದಿಯನ್ನು ಪರಿಶೀಲಿಸಿದ ಬಳಿಕ ಅಗತ್ಯ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-42-1889015014

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.