ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ (ಹಾಪ್ ಕಾಮ್ಸ್) ವತಿಯಿಂದ ಜೂನ್ 5 ರಿಂದ 7ರವರೆಗೆ ವಿನೋಬನಗರದ ಎಪಿಎಂಸಿ ಪ್ರಾಂಗಣದ ಬಳಿ ಮಾವು ಮತ್ತು ಹಲಸಿನ ಮೇಳ ಆಯೋಜಿಸಲಾಗಿದೆ.

‘ಜೂನ್ 5 ರಂದು ಬೆಳಿಗ್ಗೆ 10.30ಕ್ಕೆ ಮೇಳದ ಉದ್ಘಾಟನೆ ನಡೆಯಲಿದೆ’ ಎಂದು ಜಿಲ್ಲಾ ಹಾಪ್ಕಾಮ್ಸ್ ಅಧ್ಯಕ್ಷ ಸಂತೆಕಡೂರು ಆರ್.ವಿಜಯಕುಮಾರ್ (ದನಿ) ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಹಾಪ್ಕಾಮ್ಸ್ ತೋಟಗಾರಿಕೆ ಇಲಾಖೆಯ ಅಂಗಸಂಸ್ಥೆಯಾಗಿದ್ದು, ‘ಬೆಳೆಗಾರರಿಂದ ಬಳಕೆದಾರರಿಗೆ’ ಕಾರ್ಯಕ್ರಮದಡಿ ಕಾರ್ಯನಿರ್ವಹಿಸುತ್ತಿದೆ. ಸದಸ್ಯರ ತೋಟಗಾರಿಕಾ ಉತ್ಪನ್ನಗಳನ್ನು ಲಾಭದಾಯಕ ಬೆಲೆಗೆ ಮಾರಾಟ ಮಾಡಲು ಉತ್ಪನ್ನಗಳ ಸಂಗ್ರಹಣೆ ಮಾಡುವುದಲ್ಲದೆ ಗ್ರಾಹಕರಿಗೆ ನೇರ ಮಾರಾಟ ಮಾಡುವ ಉದ್ದೇಶದೊಂದಿಗೆ ಮಾವು, ಹಲಸು ಮೇಳ ಆಯೋಜಿಸಲಿದೆ’ ಎಂದರು.

‘ಈ ಮೇಳಕ್ಕೆ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕಾ ಮಾರಾಟ ಮಹಾಮಂಡಳ ಮತ್ತು ರಾಮನಗರದ ಮಾವು–ಹಲಸಿನ ಬೆಳೆಗಾರರ ಸಹಕಾರ ಸಂಘದ ಸಹಯೋಗವಿದೆ. ಈ ಮೇಳದಲ್ಲಿ ಅಲ್ಪಾನ್ಸೋ, ಮಲಗೋವಾ, ಮಲ್ಲಿಕಾ, ಕೇಸರ್, ಸಕ್ರೇಗುತ್ತಿ, ಕಾಲಪೋಡು, ರಸಪುರಿ, ಸಿಂಧೂರ ಮೊದಲಾದ ತಳಿಗಳ ಹಣ್ಣುಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗುವುದು. ಇದರ ಸದುಪಯೋಗವನ್ನು ಹಣ್ಣು ಬೆಳೆಗಾರರು ಮತ್ತು ಸಾರ್ವಜನಿಕರು ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು. ಹಾಪ್ಕಾಮ್ಸ್ ನಿರ್ದೇಶಕರಾದ ಶರತ್ ಮರಿಯಪ್ಪ, ಉಂಬ್ಳೆಬೈಲು ಮೋಹನ್, ಕಾಂತರಾಜ್, ಸಿದ್ದರಾಜು, ನಾರಾಯಣಪ್ಪ, ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-42-1100019575

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.